ಬದುಕಿರುವಷ್ಟು ಕಾಲ ಇತರರಿಗೆ ಪ್ರೇರಣೆಯಾಗುವ ವ್ಯಕ್ತಿಗಳನ್ನು ಜಗತ್ತು ನೆನಪಿಟ್ಟುಕೊಳ್ಳುತ್ತದೆ: ಶ್ರೀದೇವಿ ಪುತ್ತೂರು

ಧರ್ಮಸ್ಥಳ: ಗಣೇಶೋತ್ಸವ ರಾಷ್ಟ್ರೀಯತೆಯ ಭಾವವನ್ನು ಜಾಗರಣ ಮಾಡುವ ಜನರ ಉತ್ಸವ. ಸ್ವಾತಂತ್ರ್ಯ ಹೋರಾಟದಲ್ಲಿ ಬಾಲಗಂಗಾಧರ ತಿಲಕರ ನೇತೃತ್ವದಲ್ಲಿ ಸರ್ವರ ಮನೆಬಾಗಿಲಿಗೆ ದೇವರನ್ನು ಕೊಂಡೊಯ್ದು ಸಂಘಟಿತ ಸಮಾಜವನ್ನು ಕಟ್ಟುವುದಕ್ಕೆ ಸಹಕರಿಸಿದ ಧಾರ್ಮಿಕ ಉತ್ಸವ. ಇದರ ಮೂಲಕ ಸ್ವರಾಜ್ಯ, ಸ್ವದೇಶಿ, ರಾಷ್ಟ್ರೀಯ ಶಿಕ್ಷಣದ ಚಿಂತನೆಗಳನ್ನು ಸಮಾಜದ ಮುಂದಿಡಲು ಸಾಧ್ಯವಾಯಿತು ಎಂದು ಯುವ ವಾಗ್ಮಿ ಶ್ರೀದೇವಿ ಪುತ್ತೂರು ಹೇಳಿದರು.

ಕನ್ಯಾಡಿ ಗ್ರಾಮದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಆಚರಿಸಲ್ಪಟ್ಟ 9ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.

ಭಾರತವನ್ನು ಕೇವಲ ನಕ್ಷೆಯಲ್ಲಿರುವ ದೇಶ ಮಾತ್ರ ಎಂದುಕೊಂಡವರು ಆಕ್ರಮಣಕಾರರಾದರು. ಆದರೆ ಭಾರತಾಂಬೆಯ ಅಂತಃಸತ್ವವನ್ನು ಅರಿತುಕೊಳ್ಳಲು ಹೊರಟವರು ಜ್ಞಾನಮಾರ್ಗದಲ್ಲಿ ಮೋಕ್ಷ ಸಾಧನೆಯತ್ತ ಸಾಗಿದರು. ಹೀಗೆ ಜಗತ್ತಿನ ಜನರಿಗೆ ಅವರವರ ಮನೋಧರ್ಮಕ್ಕೆ ಅನುಗುಣವಾಗಿ ಸ್ಪಂದಿಸಿದ ಶ್ರೇಷ್ಠ ಪರಂಪರೆ ಭಾರತದ್ದು ಎಂದು ಅಭಿಪ್ರಾಯಪಟ್ಟರು.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಹಸ್ರಾರು ಮಹಾನ್ ಪುರುಷರು ಸ್ವರಾಜ್ಯವೆಂಬ ಧ್ಯೇಯಕ್ಕಾಗಿ ಕಟಿಬದ್ಧರಾಗಿ ತಮ್ಮ ಸರ್ವಸ್ವವನ್ನು ಸಮರ್ಪಿಸಿಕೊಂಡಿದ್ದಾರೆ‌. ಅಂತಹ ವೀರರನ್ನು ಸಮಾಜಕ್ಕೆ ಕೊಡುಗೆಯಾಗಿ ಕೊಟ್ಟ ಮಾತೆಯರ ತ್ಯಾಗವನ್ನು ಸ್ಮರಿಸಬೇಕಿದೆ. ಅವರ ತ್ಯಾಗವನ್ನು ಗೌರವಿಸುತ್ತಾ ಪ್ರೇರಣೆಯನ್ನು ಪಡೆದು ಕಾರ್ಯಪ್ರವೃತ್ತರಾಗಬೇಕಾದ ಅಗತ್ಯತೆ ನಮ್ಮ ಮುಂದಿದೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಕನ್ಯಾಡಿ ರಾಮಕ್ಷೇತ್ರದ ಮಠಾಧೀಶರಾದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸಮಾಜವನ್ನು, ಯುವಕರನ್ನು ಒಗ್ಗೂಡಿಸುವಲ್ಲಿ ಇಂತಹ ಉತ್ಸವಗಳು ಹಿಂದೆ ಕೆಲಸ ಮಾಡಿದ್ದವು. ಇನ್ನು ಮುಂದಿನ ದಿನಗಳಲ್ಲಿ ಅದರ ಅನಿವಾರ್ಯ ನಮಗಿಲ್ಲವೆಂದು ಕೈ ಬಿಡದೆ ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.

ಇದೇ ವೇಳೆ ಕನ್ಯಾಡಿಯ ನೂತನ ಕುಣಿತ ಭಜನಾ ತಂಡ ಭಕ್ತಪ್ರಿಯ ಉದ್ಘಾಟನೆಗೊಂಡಿತು.

ಪೃಥ್ವೀಶ್ ಧರ್ಮಸ್ಥಳ ನಿರೂಪಿಸಿದ ಕಾರ್ಯಕ್ರಮದಲ್ಲಿ ಸುದರ್ಶನ್ ಕನ್ಯಾಡಿ ಪ್ರಸ್ತಾವಿಕವಾಗಿ ಮಾತನಾಡಿದರು. ಗಣೇಶ್ ಬಜಿಲ ಸ್ವಾಗತಿಸಿ ಚಂದ್ರಾವತಿ ಬಜಿಲ ವಂದಿಸಿದರು.

ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಮಿತಿ ಹಾಗೂ ಹಿಂದೂ ಧಾರ್ಮಿಕ ಸೇವಾಸಮಿತಿ(ರಿ) ಕನ್ಯಾಡಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ