ಮಹಾ ಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀಗಳು

ಕನ್ಯಾಡಿ: ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಪೂಜ್ಯ ಗುರುಗಳಾದ ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ.

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಜುನಾ ಅಖಾಡದ ಆಚಾರ್ಯರಾದ ಅವದೇಶಾನಂದ ಗಿರಿ ಮಹಾರಾಜರು ಪೂಜ್ಯ ಸ್ವಾಮೀಜಿಯವರಿಗೆ ಪಟ್ಟಾಭಿಷೇಕ ನೆರವೇರಿಸಿದರು. ಇದು ಸ್ವಾಮೀಜಿಗಳ ಪೈಕಿ ಕನ್ಯಾಡಿ ಶ್ರೀರಾಮಕ್ಷೇತ್ರದ ಸದ್ಗರು ಶ್ರೀಗಳ ಮೂಲಕ ಕರ್ನಾಟಕಕ್ಕೆ ಬರುವ ಪ್ರಪ್ರಥಮ ಮಹಾಮಂಡಲೇಶ್ವರ ಪದವಿಯಾಗಿದೆ‌. ಈ ಪಟ್ಟಾಭಿಷೇಕರಾದವರಿಗೆ ಧಾರ್ಮಿಕ ಪುರುಷನಿಗೆ ರಾಷ್ಟ್ರಾದ್ಯಂತ ವಿಶೇಷ ಸೌಲಭ್ಯ ನೀಡಲಾಗುತ್ತದೆ. ಅಲ್ಲದೆ ಶ್ರೀಗಳು ಮುಂದೆ ರಾಷ್ಟ್ರಾದ್ಯಂತ ಧರ್ಮ ಪ್ರಚಾರದ ಜತೆಗೆ ಆಧ್ಯಾತ್ಮದ ಉನ್ನತ ಸಾಧನೆಗಾಗಿ ಧಾರ್ಮಿಕ ಮೌಲ್ಯಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಅರ್ಹತೆಯುಳ್ಳವರಾಗಿದ್ದಾರೆಂದು ಪರಿಗಣಿಸಿ ನಾಗಾ ಸಾದು ಸನ್ಯಾಸಿ ಪರಂಪರೆಯಲ್ಲಿ ಜುನಾ ಅಖಾಡ ಈ ಜವಾಬ್ದಾರಿಯನ್ನು ನೀಡಿದೆ.

ಹೇಗೆ ಆಯ್ಕೆ?
ಧಾರ್ಮಿಕ ಕ್ಷೇತ್ರ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ ಮಹಾಪುರುಷರಿಗೆ ಈ ಪದವಿಯನ್ನು ಪ್ರದಾನ ಮಾಡುವುದು ಅಖಾಡದ ವಾಡಿಕೆಯಾಗಿದೆ. ಈ ಪದವಿಗೆ ಅರ್ಹರಾದವರು ಸ್ವತಂತ್ರ್ಯ ಪೀಠಾಧೀಶರಾಗಿರಬೇಕಾಗಿದೆ. ಪಟ್ಟಾಭಿಷೇಕಕ್ಕೂ ಮುನ್ನ ಅಖಾಡದಲ್ಲಿರುವ ಕ್ಯಾಬಿನೇಟ್ ಸದಸ್ಯರು ಸ್ವಾಮೀಜಿವರ ಆಧ್ಯಾತ್ಮಿಕ ಸತ್ಸಂಗವನ್ನು ಪರಿಶೀಲಿಸಿ ಬೈಟಕ್ ನಲ್ಲಿ ಚರ್ಚೆ ನಡೆಸಿ ಗೌರವ ಪ್ರದಾನ ಮಾಡುವುದಾಗಿದೆ. ಶ್ರೀಗಳು ಮುಂದೆ ರಾಷ್ಟ್ರಾದ್ಯಂತ ಧರ್ಮ ಪ್ರಚಾರದ ಜತೆಗೆ ಆಧ್ಯಾತ್ಮದ ಉನ್ನತ ಸಾಧನೆಗಾಗಿ ಧಾರ್ಮಿಕ ಮೌಲ್ಯಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಅರ್ಹತೆಯುಳ್ಳವರಾಗಿದ್ದಾರೆಂದು ಪರಿಗಣಿಸಿ ನಾಗಾ ಸಾದು ಸನ್ಯಾಸಿ ಪರಂಪರೆಯಲ್ಲಿ ಜುನಾ ಅಖಾಡ ಈ ಜವಾಬ್ದಾರಿಯನ್ನು ನೀಡಿದೆ.

ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಹಿನ್ನೆಲೆ ಏನು?
ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಬಳಿಕ ಪೀಠಾಧೀಶರಾದವರು ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು. ಬಳಿಕ ಜಗದ್ಗುರುಗಳಾಗಿ ಉಡುಪಿ, ಭಟ್ಕಳ ಅಶ್ರಕೇರಿ ನಿಶ್ಚಳ ಮಕ್ಕಿ, ಭಟ್ಕಳದ ಕರಿಕಲ್ ಸಮುದ್ರ ಕಿನಾರೆ ರಾಮಮಂದಿರ ಸಹಿತ ಹರಿದ್ವಾರ ಗಂಗಾ ಕಿನಾರೆಯಲ್ಲಿ ಶಾಖಾ ಮಠ ಸ್ಥಾಪಿಸಿದ್ದಾರೆ. ಪ್ರಸ್ತುತ ಅಯೋಧ್ಯೆಯಲ್ಲಿ ಶಾಖಾ ಮಠ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಕೇರಳ, ತಿರುಪತಿ, ಶಿವಮೊಗ್ಗ ದಲ್ಲಿ ಶಾಖಾ ಮಠ ನಿರ್ಮಿಸಲು ಜಾಗ ನಿಗದಿಯಾಗಿದೆ. ಈ ಮೂಲಕ ಭಾರತದಲ್ಲಿ ಒಟ್ಟು 9 ಕಡೆ ಶಾಖಾ ಮಠ ನಿರ್ಮಿಸಿ ಜನರಲ್ಲಿ ಧಾರ್ಮಿಕ ಪ್ರಜ್ಞೆ ಉತ್ತೇಜಿಸುತ್ತಿದ್ದಾರೆ. 2018 ರಲ್ಲಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಕನ್ಯಾಡಿಗೆ ರಾಷ್ಟ್ರದಾದ್ಯಂತ ಸಾದುಸಂತರನ್ನು ಕರೆಸಿ ಧರ್ಮ ಸಂಸತ್ ನಡೆಸಿದ್ದರು.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 153 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 35 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 299 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 50 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 106 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 51 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ