
ಕನ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ನೂತನ ಶಾಲಾ ಮಕ್ಕಳ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭವು ಜರಗಿತು. ಈ ಕಾರ್ಯಕ್ರಮವು ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಅವರ ನೇತೃತ್ವದಲ್ಲಿ ನಡೆಯಿತು.


ಹೊಸದಾಗಿ ಆಯ್ಕೆಯಾದ ಶಾಲಾ ವಿದ್ಯಾರ್ಥಿಗಳ ನಾಯಕಿ ಕುಮಾರಿ ಅನನ್ಯ ಮತ್ತು ಉಪ ನಾಯಕ ಕುಮಾರ್ ಸುಹಾಸ್ ಹಾಗೂ ಮಂತ್ರಿಮಂಡಲದ ಸರ್ವ ಸದಸ್ಯರು ಪ್ರಮಾಣವಚನವನ್ನು ಸ್ವೀಕರಿಸಿದರು. ಶಾಲೆಯ ಕರ್ತವ್ಯ, ಶಿಸ್ತು, ಜವಾಬ್ದಾರಿ ಸರಿಯಾಗಿ ನಿಭಾಯಿಸುವುದಾಗಿ ಪ್ರತಿಜ್ಞೆ ಮಾಡಿದರು. ಈ ಪ್ರತಿಜ್ಞಾವಿಧಿಯನ್ನು ಶಾಲಾ ಸಹ ಶಿಕ್ಷಕಿ ಶ್ರೀಮತಿ ಶಾರದಾ ನಿರ್ವಹಿಸಿದರು. ಶಾಲಾ ಶಿಕ್ಷಕ ವೃಂದದವರು ಪ್ರಮಾಣವಚನ ಕೈಗೊಂಡ ಮಕ್ಕಳಿಗೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಉಪಸ್ಥಿತರಿದ್ದರು.