ಬೆಂಗಳೂರು: ಕಳೆದ ಕೆಲವು ವಾರಗಳಿಂದ ಕರ್ನಾಟಕದ ಹಲವು ಪ್ರದೇಶಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿದ್ದು, ಮೇ ತಿಂಗಳಿನಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಅಂಕಿಅಂಶಗಳ ಪ್ರಕಾರ, ಕಲಬುರಗಿಯಲ್ಲಿ ಮಂಗಳವಾರ ಗರಿಷ್ಠ ಗರಿಷ್ಠ ತಾಪಮಾನ 41.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರಿನಲ್ಲಿ ಮಂಗಳವಾರ ಗರಿಷ್ಠ ತಾಪಮಾನ 36.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದರೊಂದಿಗೆ, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಮೂರು ಡಿಗ್ರಿ ಹೆಚ್ಚಾದಂತಾಗಿದೆ. ಕಲಬುರಗಿ ಹೊರತುಪಡಿಸಿ ರಾಯಚೂರು (41), ಬಳ್ಳಾರಿ (40) ಮತ್ತು ವಿಜಯಪುರ (40.4) ಮಂಗಳೂರಿನಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಗುರುವಾರ ಚಿಕ್ಕಮಗಳೂರು, ಕೊಡಗು ಮತ್ತು ತುಮಕೂರು ಜಿಲ್ಲೆಗಳ ವಿವಿಧೆಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಹಾಗೂ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.