ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

ಕನ್ಯಾಡಿ: ಸೇವಾ ಭಾರತಿ ಕನ್ಯಾಡಿ ವತಿಯಿಂದ ಕರ್ನಾಟಕ ಸರ್ಕಾರದ ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಮಿಕ ಆಯುಕ್ತರಾದ ಎಸ್.ಬಿ. ರವಿಕುಮಾರ್ ಅವರನ್ನು ಭೇಟಿ ಮಾಡಿ ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು.

ಪ್ರಮುಖವಾಗಿ ಕೃಷಿ ಕಾರ್ಮಿಕರು ಕೆಲಸದ ಸಂದರ್ಭದಲ್ಲಿ ಎತ್ತರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮಲಗಿದ ಪರಿಸ್ಥಿತಿಗೆ ತಲುಪುವ ಘಟನೆಗಳು ಹೆಚ್ಚಾಗುತ್ತಿವೆ. ಇಂತಹ ಕಾರ್ಮಿಕರ ಜೀವನವನ್ನು ಸುಧಾರಿಸಲು ಹಾಗೂ ಅವರಿಗೆ ಆರ್ಥಿಕ ಮತ್ತು ವೈದ್ಯಕೀಯ ಸಹಾಯ ಒದಗಿಸಲು ವಿಶೇಷ ಯೋಜನೆಗಳನ್ನು ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿಯಡಿ ಜಾರಿಗೊಳಿಸುವಂತೆ ಮನವಿ ಮಾಡಿದರು.

ಈ ವೇಳೆ ಈಗಾಗಲೇ ಬೆನ್ನುಹುರಿ ಮುರಿತಕ್ಕೊಳಗಾದ ಕಾರ್ಮಿಕರ ಪುನರ್ವಸತಿ ಮತ್ತು ನೆರವಿಗಾಗಿ ಸೇವಾ ಭಾರತಿ ಕೈಗೊಂಡಿರುವ ವಿವಿಧ ಕಾರ್ಯಚಟುವಟಿಕೆಗಳನ್ನು ವಿವರಿಸಲಾಯಿತು. ಜೊತೆಗೆ ಬೆನ್ನುಮೂಳೆ ಮುರಿತಕ್ಕೊಳಗಾದವರ ಸಮಗ್ರ ಜೀವನ ಅಧ್ಯಯನದ ವರದಿಯನ್ನು ಅಧಿಕಾರಿಗಳಿಗೆ ಸಲ್ಲಿಸಲಾಯಿತು.

ಸಭೆಯಲ್ಲಿ ಉಪ ಕಾರ್ಮಿಕ ಆಯುಕ್ತರಾದ ಎ.ಸಿ. ತಮ್ಮಣ್ಣ ಉಪಸ್ಥಿತರಿದ್ದರು. ಸೇವಾ ಭಾರತಿಯ ಖಜಾಂಚಿ ಎ. ಜೈರಾಜ್ ಸಾಲಿಯಾನ್ ಸೇರಿದಂತೆ ಪ್ರತಿನಿಧಿಗಳು ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

Spread the love
  • Related Posts

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುತ್ತಿರುವ ಎಕ್ಸೆಲ್ ಪಿ.ಯು ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿನ ವಿಜ್ಞಾನ ವಿಭಾಗ ಶೇಕಡಾ 100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದ ಅಕ್ಷಯ್ 595 ಅಂಕ ಗಳಿಸಿದ್ರೆ, ಶಿಲ್ಪಿತಾ ಎಚ್ ಎಸ್…

    Spread the love

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಬೆಂಗಳೂರು: ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. https://karresults.nic.in KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ…

    Spread the love

    You Missed

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    • By admin
    • April 10, 2026
    • 4 views
    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    • By admin
    • April 9, 2026
    • 23 views
    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 31 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 78 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 33 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    • By admin
    • April 6, 2026
    • 57 views
    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ