ರಾಜ್ಯದ ಪ್ರಮುಖ 8 ನಗರಗಳಲ್ಲಿ ಕೊರೋನಾ ಕರ್ಫ್ಯೂ ಜಾರಿಗೊಳಿಸಲು ಸರಕಾರದ ಚಿಂತನೆ

ಬೆಂಗಳೂರು: ಏಪ್ರಿಲ್‌ 10ರಿಂದ ಏಪ್ರಿಲ್ 20ರ ವರೆಗೆ ರಾಜ್ಯದ ಬೆಂಗಳೂರು ನಗರ, ಉಡುಪಿ- ಮಣಿಪಾಲ, ಮೈಸೂರು, ಕಲಬುರಗಿ, ತುಮಕೂರು, ,ಬೀದರ್, ಮಂಗಳೂರು ನಗರಗಳಲ್ಲಿ ರಾತ್ರಿ ಕೊರೊನಾ ಕರ್ಫ್ಯೂ ಜಾರಿ ಇರಲಿದೆ ಅಂತ ಸಿಎಂ ಬಿಎಸ್‌ವೈ ತಿಳಿಸಿದ್ದಾರೆ.

ರಾತ್ರಿ 10ರಿಂದ ಬೆಳಗ್ಗೆ 5ರ ತನಕ ಈ ನಿಯಮ ಜಾರಿಯಲ್ಲಿ ಇರಲಿದೆ ಅಂತ ಹೇಳಿದ್ರು. ಇಂದು ಪ್ರಧಾನಿ ಮೋದಿಯವರ ನೇತೃತ್ವದ ನಡೆದ ಎಲ್ಲಾ ಸಿಎಂಗಳ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಿಎಂ ಬಿಎಸ್‌ವೈ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಅವರು ಮಾತನಾಡಿ ಅಗತ್ಯ ವಸ್ತುಗಳ ಸೇವೆಗಳು ಎಂದಿನಂತೆ ಇರಲಿದೆ ಅಂತ ಅವರು ಹೇಳಿದ್ರು. ಇದೇ ವೇಳೆ ರಾಜ್ಯದ ಜನತೆ ಬಳಿಯಲ್ಲಿ ಕರೋನ ಹೆಚ್ಚಳದಿಂದಾಗಿ ನಾವು ಈ ಪ್ರಯತ್ನಕ್ಕೆ ಮುಂದಾಗಿದ್ದೇವೆ, ದಯವಿಟ್ಟು ಮಾಸ್ಕ್‌ ಹಾಕಿಕೊಳ್ಳಿ, ಅಂತರವನ್ನು ಕಾಪಾಡಿಕೊಳ್ಳಿ ಅಂತ ಹೇಳಿದ್ರು. ಇನ್ನೂ ಮುಂದಿನ ದಿನದಲ್ಲಿ ಮಾಸ್ಕ್‌ ಹಾಕದೇ ಇರುವವರಿಗೆ ಹೆಚ್ಚಿನ ದಂಡವನ್ನು ಹಾಕಲಾಗುವುದು ಅಂತ ಹೇಳಿದರು. ಈ ಜಿಲ್ಲೆಗಳಲ್ಲಿ ಪ್ರಯೋಗಿಕವಾಗಿ ಜಾರಿಗೆ ತರಲಾಗಿದ್ದು, ಇದರಲ್ಲಿ ಉತ್ತಮ ಫಲಿತಾಂಶ ಬರದೇ ಹೋದ್ರೆ, ಮುಂದಿನ ದಿನದಲ್ಲಿ ರಾಜ್ಯದ ಉಳಿದ ಕಡೆಗಳಲ್ಲಿ ಇದನ್ನು ಜಾರಿಗೊಳಿಸಲಾಗುವುದು ಅಂಥ ಹೇಳಿದರು.

 ಮದುವೆ, ಸಭೆ ಸಮಾರಂಭಗಳನ್ನು ಇತಿ ಮಿತಿಗಳಲ್ಲಿ ಆಚರಣೆ ಮಾಡಬೇಕು ಅಂತ ಅವರು ಹೇಳಿದರು. ನಾವು ನಾಳೆಯಿಂದ ಮಾಸ್ಕ್‌ ಹಾಕಿಕೊಳ್ಳದವರ ವಿರುದ್ದ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು, ಯಾವುದೇ ಕಾರಣಕ್ಕೂ ಈ ಜಿಲ್ಲೆಗಳಲ್ಲಿ ಸಭೆ, ಸಮಾರಂಭಗಳನ್ನು ದೊಡ್ಡ ಪ್ರಮಾಣದಲ್ಲಿ ಮಾಡಬಾರದು ಅಂತ ಹೇಳಿದರು. ಇನ್ನೂ ಇದಕ್ಕೆ ಜನತೆ ಕೈ ಜೋಡಿಸುವಂತೆ ಮನವಿ ಮಾಡಿಕೊಂಡರು.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 25 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 88 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 210 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 35 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 25 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 21 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ