ಕರ್ನಾಟಕ ಬಂದ್ ಹಿನ್ನೆಲೆ 100ಕ್ಕೂ ಹೆಚ್ಚು ರೌಡಿ ಶೀಟರ್ ಗಳು ಪೊಲೀಸ್ ವಶಕ್ಕೆ!

ಬೆಂಗಳೂರು: ರಾಜ್ಯಾದ್ಯಂತ ಮರಾಠ ಸಮುದಾಯ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗದಲ್ಲಿದ್ದ 100ಕ್ಕೂ ಹೆಚ್ಚು ರೌಡಿ ಶೀಟರ್’ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ನಗರದ ಎಲ್ಲಾ ವಿಭಾಗದಲ್ಲೂ ಅಪರಾಧ ಹಿನ್ನೆಲೆಯುಳ್ಳ ರೌಡಿಶೀಟರ್’ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಶ್ಚಿಮ ವಿಭಾಗದಲ್ಲಿ ನೂರಕ್ಕೂ ಹೆಚ್ಚು ರೌಡಿಶೀಟರ್’ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೆಲವರನ್ನು ವಶಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಕೆಲವರು ಬಂದ್, ಪ್ರತಿಭಟನೆ ಹಾಗೂ ಗಲಾಟೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿರುವ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.

ಇಂದು ಬೆಳಗ್ಗೆ 10:30ರಿಂದ ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ರ್ಯಾಲಿ ನಡೆಸಲಿದ್ದಾರೆ. ಹೀಗಾಗಿ ಟೌನ್ ಹಾಲ್ ಬಳಿ ಪೊಲೀಸ್ ಭದ್ರತೆ ಹೆಚ್ಚು ಮಾಡಲಾಗಿದೆ.

ಒಬ್ಬರು ಇಬ್ಬರು ಎಸಿಪಿ, ಒಬ್ಬರು ಡಿಸಿಪಿ ನೇತೃತ್ವದಲ್ಲಿ 200 ಜನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ನಿಯಂತ್ರಣಕ್ಕೆ ವಾಟರ್ ಜೆಟ್ ಕೂಡ ತರಲಾಗಿದೆ.

ಮೆಜೆಸ್ಟಿಕ್‍ನಿಂದ ವಿವಿಧ ಪ್ರದೇಶಗಳಿಗೆ ಕೆಎಸ್‍ಆರ್‍’ಸಿ, ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಆರಂಭಗೊಂಡಿದೆ, ಆದರೆ, ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳುವುದಾಗಿ ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 6 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 16 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 12 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 24 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 32 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 17 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ