ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಎಲ್ಲಾ ನೇರ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ತಡೆ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಕಾರಣದಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲವನ್ನು ಕ್ರೋಡೀಕರಿಸುವ ಅಗತ್ಯವಿದ್ದು ಇದಕ್ಕಾಗಿ ಸರಕಾರದ ವೆಚ್ಚದ ಬಾಬ್ತಿನಲ್ಲಿ ಮಿತವ್ಯಯ ಪಾಲಿಸುವ ಅವಶ್ಯಕತೆ ಇದೆ.

ಈ ನಿಟ್ಟಿನಲ್ಲಿ 2020 – 21 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಬ್ಯಾಕ್ಲಾಗ್ ಹುದ್ದೆಗಳು ಸೇರಿದಂತೆ ಎಲ್ಲಾ ನೇರ ನೇಮಕಾತಿ ಹುದ್ದೆ ಗಳನ್ನು ಭರ್ತಿ ಮಾಡುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದೆ. ಈಗಾಗಲೇ ಆರ್ಥಿಕ ಇಲಾಖೆಯ ಅನುಮತಿ ಪಡೆದು ನೇಮಕಾತಿಯ ವಿವಿಧ ಹಂತಗಳಲ್ಲಿರುವ ಹುದ್ದೆಗಳಿಗೂ ಸಹ ಈ ಆದೇಶ ಅನ್ವಯ ಆಗುತ್ತದೆ ಎಂದು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

READ ALSO