ಕರ್ನಾಟಕದಲ್ಲಿ ಸಿಎಂ ಸಮ್ಮುಖದಲ್ಲಿ 6ಮಂದಿ ನಕ್ಸಲರು ಶಸ್ತಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ

ಬೆಂಗಳೂರು: ಕರ್ನಾಟಕದಲ್ಲಿ 6 ಮಂದಿ ನಕ್ಸಲೀಯರು ಶಸಾಸ್ತ್ರಗಳನ್ನು ತ್ಯಜಿಸಿದ್ದು, ಸರ್ಕಾರದ ಶರಣಾಗತಿ ಪ್ಯಾಕೇಜ್ ಒಪ್ಪಿಕೊಂಡು ಶರಣಾಗಿದ್ದಾರೆ. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿದ್ದು, ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗುವ ಕಾಲ ಸಮೀಪಿದಂತಾಗಿದೆ.

ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯದ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ ಹಾಗೂ ತಮಿಳುನಾಡಿನ ಕೆ. ವಸಂತ್ ಅವರು ಹಸಿರು ಬಟ್ಟೆ ಕಳಚಿಟ್ಟು, ಕೆಂಪು ಬಾವುಟ ಕೆಳಗಿಟ್ಟು ಶರಣಾದರು. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸರು ಶರಣಾದ ನಕ್ಸಲರನ್ನು ತಮ್ಮ ವಶಕ್ಕೆ ಪಡೆಯಲಿದ್ದು, ಕೋರ್ಟ್‌ಗೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದಾರೆ. ಇದರೊಂದಿಗೆ ಹಲವು ದಶಕಗಳಿಂದ ಸರ್ಕಾರಕ್ಕೆ ತಲೆ ನೋವಾಗಿದ್ದ ನಕ್ಸಲ್ ಚಳವಳಿ ಬಹುತೇಕ ಅಂತ್ಯವಾಗಿದೆ.

ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದವರು. ಹಲವು ವರ್ಷಗಳಿಂದ ಇವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಇವರ ವಿರುದ್ಧ 85 ಪ್ರಕರಣಗಳಿವೆ.

ನಕ್ಸಲರು ಕಳೆದ ಮೂರು ದಿನಗಳಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಶರಣಾಗತಿ ಕುರಿತು ಮಾತುಕತೆಯನ್ನು ಚಿಕ್ಕಮಗಳೂರು ಕಾಡಿನಲ್ಲಿ ನಡೆಸುತ್ತಿದ್ದರು. ಬುಧವಾರ ಅವರುಗಳು ಶರಣಾಗಲು ದಿನಾಂಕ ನಿಗದಿ ಮಾಡಲಾಯಿತು. ಮೊದಲು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶರಣಾಗಲಿದ್ದಾರೆ ಎಂಬ ಮಾಹಿತಿ ಇತ್ತು.ಆದರೆ ಬುಧವಾರ ಬೆಳಗ್ಗೆ ಚಿಕ್ಕಮಗಳೂರಿನಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಪೊಲೀಸರ ಭದ್ರತೆಯಲ್ಲಿ ಬೆಂಗಳೂರು ನಗರಕ್ಕೆ ಆಗಮಿಸಿದ ನಕ್ಸಲರು, ಮುಖ್ಯಮಂತ್ರಿಗಳ ಮುಂದೆ ಶರಣಾಗಿದ್ದಾರೆ.

ಪೊಲೀಸರು ಅವರನ್ನು ವಶಕ್ಕೆ ಪಡೆಯಲಿದ್ದು, ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ. ನಕ್ಸಲರನ್ನು ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕೋರ್ಟ್‌ ಮುಂದೆ ಹಾಜರುಪಡಿಸಬೇಕಿದೆ. ಡಿಸೆಂಬರ್ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ಭೇಟಿ ಮಾಡಿದ್ದರು.

ಈ ಹಿಂದೆ ರಾಜ್ಯ ಸರ್ಕಾರ ಘೋಷಿಸಿದ್ದ ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿ ಹಾಗಲಗಂಚಿ ವೆಂಕಟೇಶ್, ಮಲ್ಲಿಕಾ, ಹೊರ್ಲೆ ಜಯ, ಸಿರಿಮನೆ ನಾಗರಾಜ್, ನೂರು ಶ್ರೀಧರ್, ನೀಲಗುಳಿ ಪದ್ಮನಾಭ, ಪರಶುರಾಮ, ಭಾರತಿ, ಕನ್ಯಾಕುಮಾರಿ, ಶಿವು, ಚನ್ನಮ್ಮು ಸೇರಿ ಒಟ್ಟು 14 ಮಂದಿ ನಕ್ಸಲೀಯರು ಸಮಾಜದ ಮುಖ್ಯ ವಾಹನಿಗೆ ಮರಳಿದ್ದರು.

ಮೂಲಗಳ ಪ್ರಕಾರ ರಾಜ್ಯದಲ್ಲಿ ಇನ್ನೂ ಓರ್ವ ನಕ್ಸಲ್ ಮಾತ್ರ ಶರಣಾಗತಿಗೆ ಬಾಕಿ ಉಳಿದಿದ್ದು. ಆತನ ಶರಣಾಗತಿಗೆ ಪ್ರಯತ್ನ ನಡೆಸಲಾಗುತ್ತಿದೆ. ಇದರೊಂದಿಗೆ ರಾಜ್ಯದಲ್ಲಿ ಎರಡೂವರೆ ದಶಕಗಳ ಕಾಲದ ನಕ್ಸಲ್ ಚಳವಳಿ ಅಂತ್ಯ ಕಂಡಂತಾಗುತ್ತದೆ

Spread the love
  • Related Posts

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ಬೆಳ್ತಂಗಡಿ: ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ವಿಜಯಗೋಪುರವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು. ವಿಜಯಗೋಪುರವನ್ನು ಉದ್ಘಾಟಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಯಾವುದೇ ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದಾಗಿದ್ದು, ಅತ್ಯಾಕರ್ಷಕ ರಾಜಗೋಪುರ…

    Spread the love

    ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:

    ದುಬೈ: ಯುದ್ಧದ ಪರಿಸ್ಥಿತಿಯಿಂದಾಗಿ ಇಸ್ರೇಲ್, ಇರಾನ್, ಇರಾಕ್, ಕುವೈತ್ ಮತ್ತು ಕತಾರ್ ದೇಶಗಳು ತಮ್ಮ ವಾಯುಮಾರ್ಗವನ್ನು ಮುಚ್ಚಿವೆ. ಇದರಿಂದಾಗಿ ಭಾರತದ ಏರ್ ಇಂಡಿಯಾ ಮತ್ತು ಇಂಡಿಗೋ ಸೇರಿದಂತೆ ಹಲವು ಅಂತರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ವಿಮಾನಗಳನ್ನು ಬೇರೆ ಮಾರ್ಗಕ್ಕೆ ತಿರುಗಿಸಲಾಗಿದೆ.…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 8 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್