ಬೆಳ್ತಂಗಡಿ: ಶ್ರೀ ಕ್ಷೇತ್ರ ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಆಶೀರ್ವದಿಸಿದರು.
ಈ ಸಂಧರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ಹಾಗೂ ದೇವಸ್ಥಾನದ ಆಡಳಿತ ಮೊಕ್ತೇಸ್ತರರು ಜೀರ್ಣೋದ್ದಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿಯ ಎಲ್ಲಾ ಸದಸ್ಯರು, ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಸಂತಿ ಉಪಾದ್ಯಕ್ಷೆ ಶ್ರೀಮತಿ ಕುಶಲ ಮತ್ತು ಸದಸ್ಯರಾದ ಸಚಿನ್ ಕೆ ಆರ್, ಶ್ರಿ ದಿನೇಶ್ ನೆಕ್ಕರೆ, ಶ್ರೀ ಬಾಬುಗೌಡ ಪರ್ಪಳ, ಶ್ರೀಮತಿ ಸಜಿತಾ, ಶ್ರೀಮತಿ ಸವಿತಾ ಅಲಂಗಾಯಿ, ಶ್ರೀಮತಿ ಮಾಲತಿ, ಹಾಗೂ ಎಲ್ಲಾ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.