ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

ಸಿಇಟಿ ಫಲಿತಾಂಶದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ

ಗುರುವಾಯನಕೆರೆ, ಜೂನ್ 7: ಇತ್ತೀಚೆಗೆ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮೇಲುಗೈಯನ್ನು ಸಾಬೀತುಪಡಿಸಿದ್ದಾರೆ.

ಈಗಾಗಲೇ ಬಿಎಸ್ಸಿ ಅಗ್ರಿ ಪ್ರಾಕ್ಟಿಕಲ್ ಪರೀಕ್ಷೆ, ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಸಿಇಟಿ ಫಲಿತಾಂಶದಲ್ಲಿಯೂ ಅತ್ಯುನ್ನತ ರ‍್ಯಾಂಕ್‌ಗಳನ್ನು ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಮೊದಲ 100 ರ‍್ಯಾಂಕ್‌ಗಳ ಪೈಕಿ 31 ವಿದ್ಯಾರ್ಥಿಗಳು, ಮೊದಲ 500 ರೊಳಗೆ 87 ವಿದ್ಯಾರ್ಥಿಗಳು, ಮೊದಲ 1000 ರೊಳಗೆ 186 ವಿದ್ಯಾರ್ಥಿಗಳು, ಮೊದಲ 2000 ರೊಳಗೆ 268 ವಿದ್ಯಾರ್ಥಿಗಳು ಹಾಗೂ ಮೊದಲ 5000 ರೊಳಗೆ 514 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳಾದ ಆನಂದ್ ರೆಡ್ಡಿ (21), ಚಿನ್ಮಯ್ ಪ್ರಶಾಂತ್ (28), ವಿಶ್ವಾಸ್ ಎಂ. ಅಸುಂಡಿ (29), ಕೌಶಲ್ ಕುಲಾಲ್ (31), ರೋಹಿತ್ ಎಂ. (32), ಅಕ್ಷಯ್ ಎ. (41), ಫಾತಿಮಾ ರಾಯೀಜಾ (54), ಮೌರ್ಯ ವೈ.ಡಿ. (75), ಶಿಲ್ಪಿತಾ ಹೆಚ್.ಎಸ್. (86), ಸಮ್ಯಕ್ ವಿನಯ್ (97), ಗಗನ್ ದೀಪ್ ಎಂ. (99) ಸೇರಿದಂತೆ ಅನೇಕ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್ ಗಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು, “ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಯೂ ನಿರಂತರ ಸಾಧನೆ ಮಾಡುತ್ತಿದ್ದಾರೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾನ ಪೊನ್ನಮ್ಮ 600ಕ್ಕೆ 600 ಅಂಕ ಪಡೆದು ರಾಜ್ಯ ಪ್ರಥಮ ಸ್ಥಾನ ಗಳಿಸಿದ್ದು, ಜೆಇಇ, ಸಿಎಸ್ ಹಾಗೂ ಎನ್‌ಡಿಎ ಪರೀಕ್ಷೆಗಳಲ್ಲಿಯೂ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಇದೀಗ ಸಿಇಟಿ ಪರೀಕ್ಷೆಯಲ್ಲೂ ಅತ್ಯಧಿಕ ವಿದ್ಯಾರ್ಥಿಗಳು ಅತ್ಯುನ್ನತ ರ‍್ಯಾಂಕ್ ಪಡೆದು ಸಂಸ್ಥೆಯ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಸಾಧನೆಗೆ ಕಾರಣರಾದ ಬೋಧಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಅವರು ಅಭಿನಂದಿಸಿದರು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ