ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸಿ ಪ್ರತಿಕ್ರಿಯಿಸಿರುವ ಸ್ವಾಮೀಜಿ, “ಗ್ರಾಮೀಣ ಪ್ರದೇಶದಲ್ಲಿರುವ ನಮ್ಮ ಮಠಗಳು ವಾಸ್ತವವಾಗಿ ಬಡವರ ಸೇವೆಯಲ್ಲಿ ತೊಡಗಿರುವ ಬಡ ಮಠಗಳಾಗಿವೆ. ಇಂತಹ ಗ್ರಾಮೀಣ ಭಾಗದ ಮಠಗಳನ್ನು ಗುರುತಿಸಿ ಆಯ್ಕೆ ಮಾಡಿರುವುದರ ಜೊತೆಗೆ, ಸ್ಥಳೀಯ ತುಳು ಭಾಷೆ ಹಾಗೂ ಸಂಸ್ಕೃತಿಗೆ ಪ್ರಾಶಸ್ಯ ನೀಡಿ ಅನುದಾನ ನೀಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.



