ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ.

ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ.

ತೆಂಗಿನ ಮರವನ್ನೇರಿ ಎಳನೀರು, ಕಾಯಿ ಕೀಳುವವರಿಗೆ, ನೀರಾ ತಂತ್ರಜ್ಞರಿಗೆ, ತೆಂಗಿನ ಕಾಯಿ ಕೊಯ್ಲು ಮಾಡುವವರಿಗೆ, ಹೈಬ್ರಿಡೈನೇಶನ್‌ (ಸಂಕರೀಕರಣ) ಕೆಲಸಗಾರರಿಗೆ, ಡಿಎಸ್‌ಪಿ (ಪ್ರಾತ್ಯಕ್ಷಿಕೆ ಹಾಗೂ ಬೀಜ ಉತ್ಪಾದನೆ) ಫಾರ್ಮ್‌ಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹಾಗೂ ಎಫ್‌ಸಿಟಿ (ಫ್ರೆಂಡ್ಸ್‌ ಆಫ್‌ ಕೋಕೊನಟ್ ಟ್ರೀ) ಕೌಶಲ–ತರಬೇತಿ ಕಾರ್ಯಕ್ರಮದಲ್ಲಿ ತೊಡಗಿರುವ ಕಾರ್ಮಿಕರಿಗೆ ಸಮಗ್ರ ವಿಮಾ ರಕ್ಷಣೆ ದೊರೆಯಲಿದೆ.

ವೈಯಕ್ತಿಕ ಅಪಘಾತ ವಿಮೆ:

ವಿಮೆಯ ವಾರ್ಷಿಕ ಕಂತು (ಜಿಎಸ್‌ಟಿ ಸೇರಿ) ₹956 ಆಗಿದೆ. ಇದರಲ್ಲಿ ತೆಂಗು ಅಭಿವೃದ್ಧಿ ಮಂಡಳಿಯ ಕಂತಿನ ಪಾಲು ₹717 ಆಗಿದ್ದು, ಉಳಿದ ₹239 ಕಂತಿನ ಮೊತ್ತವನ್ನು ಫಲಾನುಭವಿಗಳು ಪಾವತಿಸಬೇಕಿದೆ.

ಇದು ವೈಯಕ್ತಿಕ ಅಪಘಾತ ವಿಮಾ ಯೋಜನೆಯಾಗಿದೆ. ಮರದಿಂದ ಕಾಯಿ ಕೀಳುವಾಗ ಬಿದ್ದು ಮೃತಪಟ್ಟರೆ ಅಥವಾ ಅಂಗವೈಕಲ್ಯಕ್ಕೆ ತುತ್ತಾದರೆ ಕೇರಾ ವಿಮೆ ನೆರವಾಗಲಿದೆ. ಗರಿಷ್ಠ ₹7 ಲಕ್ಷದವರೆಗೆ ಪರಿಹಾರ ಸಿಗಲಿದೆ.

‘ಈ ಯೋಜನೆಯು ತೆಂಗಿನಕಾಯಿ ಕೊಯ್ಲು ಮಾಡುವವರಿಗೆ ಅನುಕೂಲವಾಗಿದ್ದು, ಪ್ರಯೋಜನ
ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸ ಲಾಗುತ್ತಿದೆ. ಕಂತಿನ ಮೊತ್ತ  ಕಡಿಮೆ ಪ್ರಮಾಣದಲ್ಲಿದ್ದು, ಕಟ್ಟಿದವರು ಸಮಗ್ರ ವಿಮಾ ರಕ್ಷಣೆಯ ಸೌಲಭ್ಯ ಪಡೆಯ ಬಹುದಾಗಿದೆ

‘ತೋಟಗಾರಿಕೆ ಇಲಾಖೆ ಮೂಲಕ ಮಾರ್ಚ್‌ ಅಂತ್ಯದವರೆಗೂ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯ ಕಚೇರಿಗಳಲ್ಲಿ ಹೆಚ್ಚಿನ ವಿವರ ಪಡೆದುಕೊಳ್ಳಬಹುದು.

ವಿಮೆಯಡಿ ಪರಿಹಾರ ಎಷ್ಟು?

₹7 ಲಕ್ಷ; ಸಾವು/ ಶಾಶ್ವತ ಅಂಗವೈಕಲ್ಯ  

₹3.50 ಲಕ್ಷ;ಭಾಗಶಃ ಅಂಗವೈಕಲ್ಯ

₹2 ಲಕ್ಷ; ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ 2 ತಿಂಗಳವರೆಗೆ ಔಷಧ ಒಳಗೊಂಡಂತೆ ಆಸ್ಪತ್ರೆಯ ವೆಚ್ಚದ ಮರುಪಾವತಿ 

₹3,500; ಅಪಘಾತ, ಸಾವಿನ ಸಂದರ್ಭದಲ್ಲಿ ಆಂಬುಲೆನ್ಸ್‌ ಶುಲ್ಕ  

₹21 ಸಾವಿರ; ತಾತ್ಕಾಲಿಕ ಅಂಗವೈಕಲ್ಯದ ಸಂದರ್ಭದಲ್ಲಿ ಗರಿಷ್ಠ ಆರು ವಾರದವರೆಗೆ ಪರಿಹಾರ

₹3 ಸಾವಿರ; ಆಸ್ಪತ್ರೆಯಲ್ಲಿ ಜೊತೆಯಲ್ಲಿದ್ದು ನೋಡಿಕೊಳ್ಳುವವರಿಗೆ ನೈಜ ಬಿಲ್‌ಗಳ ಆಧಾರದ ಮೇಲಿನ ವೆಚ್ಚ 

₹5,500; ಅಂತ್ಯಕ್ರಿಯೆಗೆ ನೀಡುವ ವೆಚ್ಚ

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ