ಕೇರಳದ ಇಡುಕ್ಕಿಯಲ್ಲಿ ಭೂ ಕುಸಿತಕ್ಕೆ 15 ಬಲಿ! 80ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿರುವ ಸಾಧ್ಯತೆ!

ತಿರುವನಂತಪುರಂ: ಕೇರಳದಲ್ಲಿ ಮತ್ತೆ ಪ್ರಕೃತಿ ಮುನಿದಿದ್ದು, ಕೇರಳದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇಲ್ಲಿನ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 15 ಜನರು ಸಾವನ್ನಪ್ಪಿದ್ದಾರೆ.

ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ 50 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶುಕ್ರವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿ ಸುಮಾರು 70 ರಿಂದ 80 ಜನರು ವಾಸವಿದ್ದರು.

ಭಾರೀ ಮಳೆಯಿಂದಾಗಿ ಪೆಟ್ಟುಮುಡಿಯಲ್ಲಿ ವಾಸವಿದ್ದ ಟೀ ಎಸ್ಟೇಟ್​ ಕಾರ್ಮಿಕರ ಗುಡಿಸಲುಗಳು ಭೂ ಕುಸಿತದಿಂದ ಭೂ ಗರ್ಭ ಸೇರಿವೆ.

ಟೀ ಎಸ್ಟೇಟ್​ನಲ್ಲಿ ಕೆಲಸ ಮಾಡುವ ಕಾರ್ಮಿಕರ ಸಾಲು ಮನೆಗಳ ಮೇಲೆ ದೊಡ್ಡದಾದ ಗುಡ್ಡ ಕುಸಿದು ಬಿದ್ದಿದೆ. ಇದರಿಂದ ಇಬ್ಬರು ಮಕ್ಕಳು ಹಾಗೂ ಐದು ಮಂದಿ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ನೆರೆಯ ತಮಿಳುನಾಡಿನ ಕಾರ್ಮಿಕರಾಗಿದ್ದಾರೆ. ಈವರೆಗೂ ಮಣ್ಣಿನಡಿ ಸಿಲುಕಿ ಮೃತಪಟ್ಟ 15 ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಐದು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಟಾಟಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಈ ಭಾಗದ ಆಸ್ಪತ್ರೆಗಳಲ್ಲಿ ಗಾಯಾಳುಗಳ ಚಿಕಿತ್ಸೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಎನ್​ಡಿಆರ್​ಎಫ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹಾಗೆಯೇ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ಗಳನ್ನು ಕಳುಹಿಸಿಕೊಡುವಂತೆ ಕೋರಿದೆ.

ಭೂ ಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಎರಡು ಲಕ್ಷ ರೂಪಾಯಿ ಪರಿಹಾರಧನ ಘೋಷಿಸಲಾಗಿದೆ. ಹಾಗೆಯೇ ನೆರೆಯಿಂದ ಸಂಬಂಧಿತ ಘಟನೆಯಿಂದ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರಧನ ಘೋಷಿಸಿರುವುದಾಗಿ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 291 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 49 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 322 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 55 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 114 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ