ಕೇರಳದ ಇಡುಕ್ಕಿಯಲ್ಲಿ ಭೂ ಕುಸಿತಕ್ಕೆ 15 ಬಲಿ! 80ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿರುವ ಸಾಧ್ಯತೆ!

ತಿರುವನಂತಪುರಂ: ಕೇರಳದಲ್ಲಿ ಮತ್ತೆ ಪ್ರಕೃತಿ ಮುನಿದಿದ್ದು, ಕೇರಳದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇಲ್ಲಿನ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 15 ಜನರು ಸಾವನ್ನಪ್ಪಿದ್ದಾರೆ.

ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ 50 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶುಕ್ರವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿ ಸುಮಾರು 70 ರಿಂದ 80 ಜನರು ವಾಸವಿದ್ದರು.

ಭಾರೀ ಮಳೆಯಿಂದಾಗಿ ಪೆಟ್ಟುಮುಡಿಯಲ್ಲಿ ವಾಸವಿದ್ದ ಟೀ ಎಸ್ಟೇಟ್​ ಕಾರ್ಮಿಕರ ಗುಡಿಸಲುಗಳು ಭೂ ಕುಸಿತದಿಂದ ಭೂ ಗರ್ಭ ಸೇರಿವೆ.

ಟೀ ಎಸ್ಟೇಟ್​ನಲ್ಲಿ ಕೆಲಸ ಮಾಡುವ ಕಾರ್ಮಿಕರ ಸಾಲು ಮನೆಗಳ ಮೇಲೆ ದೊಡ್ಡದಾದ ಗುಡ್ಡ ಕುಸಿದು ಬಿದ್ದಿದೆ. ಇದರಿಂದ ಇಬ್ಬರು ಮಕ್ಕಳು ಹಾಗೂ ಐದು ಮಂದಿ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ನೆರೆಯ ತಮಿಳುನಾಡಿನ ಕಾರ್ಮಿಕರಾಗಿದ್ದಾರೆ. ಈವರೆಗೂ ಮಣ್ಣಿನಡಿ ಸಿಲುಕಿ ಮೃತಪಟ್ಟ 15 ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಐದು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಟಾಟಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಈ ಭಾಗದ ಆಸ್ಪತ್ರೆಗಳಲ್ಲಿ ಗಾಯಾಳುಗಳ ಚಿಕಿತ್ಸೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಎನ್​ಡಿಆರ್​ಎಫ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹಾಗೆಯೇ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ಗಳನ್ನು ಕಳುಹಿಸಿಕೊಡುವಂತೆ ಕೋರಿದೆ.

ಭೂ ಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಎರಡು ಲಕ್ಷ ರೂಪಾಯಿ ಪರಿಹಾರಧನ ಘೋಷಿಸಲಾಗಿದೆ. ಹಾಗೆಯೇ ನೆರೆಯಿಂದ ಸಂಬಂಧಿತ ಘಟನೆಯಿಂದ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರಧನ ಘೋಷಿಸಿರುವುದಾಗಿ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

Spread the love
  • Related Posts

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮೊಬೈಲ್‌ ಫೋನ್‌ ರಿಪೇರಿ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 17.03.2025 ರಿಂದ 15.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್…

    Spread the love

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ…

    Spread the love

    You Missed

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    • By admin
    • March 15, 2025
    • 68 views
    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    • By admin
    • February 21, 2025
    • 54 views
    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 63 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 231 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 85 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 160 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ