ಕೇರಳ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ದುರಂತ

ಕ್ಯಾಲಿಕಟ್ : ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳಕ್ಕೆ ಬರುತ್ತಿದ್ದ ಏರ್​ ಇಂಡಿಯಾ ವಿಮಾನ ಕೋಳಿಕ್ಕೊಡ್​ ವಿಮಾನ ನಿಲ್ದಾಣ ರನ್​ವೇನಲ್ಲಿ ಸ್ಕಿಡ್​ ಆಗಿದ್ದು, ಅಪ್ಪಳಿಸಿದ ರಭಸಕ್ಕೆ ಎರಡು ಭಾಗವಾಗಿದೆ.

ಶುಕ್ರವಾರ ರಾತ್ರಿ 7.40ರ ಸುಮಾರಿಗೆ ಭಾರಿ ಮಳೆಯ ನಡುವೆಯೇ ದುರ್ಘಟನೆ ಸಂಭವಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.

READ ALSO

ವಿಮಾನ ದುರಂತದಲ್ಲಿ ಇಬ್ಬರು ಪೈಲಟ್ ಸೇರಿ ಹದಿನೈದು ಮಂದಿ ಸಾವಿಗೀಡಾಗಿದ್ದಾರೆ.

ಪೈಲಟ್ ಗಳಾದ ದೀಪಕ್ ವಸಂತ್, ಹಾಗೂ ಅಖಿಲೇಶ್ ಸಾವನ್ನಪ್ಪಿದ್ದಾರೆ.

ಸಾರ್ವಜನಿಕವಾಗಿ ಲಭ್ಯವಾದ ಘಟನಾವಳಿಯ ಮೊದಲ ದೃಶ್ಯಗಳಲ್ಲಿ ವಿಮಾನವು ಎರಡು ತುಂಡುಗಳಾಗಿ ಒಡೆದಿದ್ದು, ಅದರ ಅವಶೇಷಗಳು ರನ್​ವೇ ಮತ್ತು ಅದರಾಚೆಗೆ ಹರಡಿಕೊಂಡಿವೆ.

ಸದ್ಯದ ಮಾಹಿತಿ ಪ್ರಕಾರ ಅನೇಕ ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಸಿಬ್ಬಂದಿ, ಪೊಲೀಸರು ಹಾಗೂ ಆಂಬುಲೆನ್ಸ್​ಗಳು ಬೀಡುಬಿಟ್ಟಿವೆ. ಇನ್ನು ವಿಮಾನಕ್ಕೆ ಬೆಂಕಿ ತಗುಲಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.