ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

ಧರ್ಮಸ್ಥಳ: ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ KIOCL ಸಂಸ್ಥೆಯನ್ನು NMDC ಸಂಸ್ಥೆ ಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರ ಉಕ್ಕು ಸಚಿವರಾದ H.D.ಕುಮಾರಸ್ವಾಮಿ ಯವರನ್ನು ಒತ್ತಾಯಿಸುವ ಅಂಗವಾಗಿ ರಾಜ್ಯಸಭಾ ಸದಸ್ಯರೂ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರನ್ನು ಧರ್ಮಸ್ಥಳದಲ್ಲಿ ಇಂದು ಭೇಟಿಯಾಗಿ ಮನವಿಯನ್ನು ನೀಡಲಾಯಿತು.

ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಭಾರತೀಯ ಮಜ್ದೂ ರ್ ಸಂಘದ ಕಾರ್ಯದರ್ಶಿ ಜಯರಾಜ್ ಸಾಲಿಯನ್ ದ. ಕ ಜಿಲ್ಲಾ ಬಿಎಮ್ಎಸ್ ಅಧ್ಯಕ್ಷರಾದ ಅನಿಲ್ ಕುಮಾರ್ ರವರ ನೇತೃತ್ವದಲ್ಲಿ ಕುದುರೆಮುಖ ಮಜ್ದೂರ್ ಸಂಘದ ಕೇಂದ್ರ ಸಮಿತಿಯ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಚಂದ್ರೇಗೌಡ, ಕಾರ್ಯಾಧ್ಯಕ್ಷರಾದ ಭಗವಾನ್ ದಾಸ್, ಕಾರ್ಯಾಧ್ಯಕ್ಷರಾದ ಕೆಂಚೇಗೌಡ, ಖಜಾಂಚಿ ಉದಯಕುಮಾರ್ B. C, ಸಂಘಟನಾ ಕಾರ್ಯದರ್ಶಿಯಾದ ಶ್ರೀಧರ್ ಉಳ್ಳಾಲ್ ಈ ಮನವಿಯನ್ನು ನೀಡಿ ತ್ವರಿತವಾಗಿ ವಿಲೀನ ಪ್ರಕ್ರಿಯೆಯನ್ನು ಜಾರಿಗೊಳಿಸಲು ಸಹಕರಿಸಬೇಕಾಗಿ ವಿನಂತಿಸಲಾಯಿತು. ವೀರೇಂದ್ರ ಹೆಗ್ಗಡೆಯವರು ಮನವಿಯನ್ನು ಸ್ವೀಕರಿಸಿ ಪ್ರಧಾನಮಂತ್ರಿಯವರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಿ ತ್ವರಿತ ಗತಿಯಲ್ಲಿ ವಿಲೀನ ಪ್ರಕ್ರಿಯೆಯನ್ನು ಮಾಡುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು, ಕೇಂದ್ರ ಉಕ್ಕು ಸಚಿವರಾದ ಮಾನ್ಯ ಕುಮಾರಸ್ವಾಮಿಯವರು ಸದ್ಯದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಅವರಿಗೆ ಒತ್ತಡ ತಂದು ಈ ಮನವಿಯನ್ನು ಗುಣಾತ್ಮಕವಾಗಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಕುದುರೆಮುಖ ಸಂಸ್ಥೆಗಾಗಿ ತಮ್ಮ ಭೂಮಿ ಕಳೆದುಕೊಂಡ ಮಲ್ಲೇಶ್ವರ ಗ್ರಾಮಸ್ಥರ ಪರವಾಗಿ ಶ್ರೀ ಪಾಲಯ್ಯನವರು ಮನವಿಯನ್ನು ಸಲ್ಲಿಸಿದರು. Kiocl ಕುದುರೆಮುಖದ ಪ್ರತಿನಿಧಿಯಾಗಿ ಶ್ರೀ ಮಂದ್ರ ರವರು ಉಪಸ್ಥಿತರಿದ್ದರು.

Spread the love
  • Related Posts

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ. ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ…

    Spread the love

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವು ದಿನಾಂಕ 24/01/2025ರಿಂದ 30/01/2025ರ ವರೆಗೆ ನಡೆಯಲಿದೆ Spread the love

    Spread the love

    You Missed

    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    • By admin
    • January 19, 2025
    • 114 views
    ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • January 19, 2025
    • 27 views
    ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    • By admin
    • January 18, 2025
    • 29 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    • By admin
    • January 18, 2025
    • 60 views
    ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    • By admin
    • January 17, 2025
    • 34 views
    ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

    • By admin
    • January 17, 2025
    • 35 views
    ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ