ಭವಿಷ್ಯದಲ್ಲಿ ಗಾಳಿ ಗಂಡಾಂತರ ಬಂದು ತಿನ್ನಲು ಅನ್ನವಿಲ್ಲದ ಸ್ಥಿತಿ ಬರಲಿದೆ: ಕೋಡಿ ಶ್ರೀಗಳ ಭವಿಷ್ಯ

ಚಿಕ್ಕಬಳ್ಳಾಪುರ: ಸದ್ಯ ಕೊರೊನಾ ಮಹಾಮಾರಿಯ ಶಕ್ತಿ ಕುಂದಿದ್ದು ಎಲ್ಲವೂ ಸರಿ ಹೋಗಲಿದೆ. ಆದರೆ ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರದಿಂದ ಜನತೆ ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದೆ ನರಳುತ್ತಾರೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಚಿಕ್ಕಬಳ್ಳಾಪುರ ನಗರಕ್ಕೆ ಮೊದಲ ಬಾರಿಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದ ಶ್ರೀಗಳು, ಕೊರೊನಾ ಪೂರ್ವದಲ್ಲಿಯೇ ನಾನು ಹೇಳಿದ್ದೆ, ಸಂಕಟ ಬಂದಾಗ ವೆಂಕಟರಮಣ ಎನ್ನುವ ಜನರಿಗೆ ಬುದ್ಧಿ ಕಲಿಸಬೇಕೆನ್ನುವ ಕಾರಣಕ್ಕಾಗಿಯೇ ಕೊರೊನಾ ದೇವರನ್ನು ಹಿಡಿದುಕೊಂಡು ಭೂಮಿಗೆ ಬಂತು ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಕೊರೊನಾ ಅಬ್ಬರ ಎಷ್ಟಿತ್ತು ಎನ್ನುವುದಕ್ಕೆ ದೇವಾಲಯಗಳು ಬಾಗಿಲು ಮುಚ್ಚಿದ್ದೇ ಸಾಕ್ಷಿಯಾಗಿದೆ. ತಿರುಪತಿ, ಧರ್ಮಸ್ಥಳ, ಚಾಮುಂಡೇಶ್ವರಿ ದೇವಾಲಯಗಳ ಬಾಗಿಲು ಹಾಕಿಸಿತು. ಮಠ, ಮಾನ್ಯಗಳು ಬಾಗಿಲು ಹಾಕುವಂತಾಯಿತು ಎಂದರು.

READ ALSO