ಉಳ್ಳಾಲದ ಕೊಂಡಾಣ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್ ಪತ್ತೆ!

ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಕೊಂಡಾಣ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್‌ ಪತ್ತೆಯಾಗಿದೆ.

ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ತೆರೆಯುವ ಸಂದರ್ಭದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ.

READ ALSO

ಕೆಲ ದಿನಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು. ಅದೇ ಸಂದರ್ಭದಲ್ಲಿ ಕೊಂಡಾಣ ದೈವಸ್ಥಾನದಲ್ಲಿಯೂ ಆರೋಪಿಗಳು ದುಷ್ಕೃತ್ಯ ಎಸಗಿರುವ ಸಾಧ್ಯತೆಗಳಿವೆ.

ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.