ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ ಜಿಲ್ಲಾ ಪೋಲೀಸ್ ತಂಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಹಬಾಷ್ ಗಿರಿ

ಮಂಗಳೂರು: ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ. ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದ ಪೊಲೀಸ್ ತಂಡವನ್ನು ಸಂಸದ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿನಂದಿಸಿದ್ದಾರೆ.

ಪೊಲೀಸ್ ತಂಡವನ್ನು ಅಭಿನಂದಿಸಿ ಮಾತನಾಡಿದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಾಲಕನ ಅಪಹರಣ ಪ್ರಕರಣ ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸ್ ತಂಡ ಯೋಜನಾ ಬದ್ಧವಾಗಿ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಬಂಧಿಸಿರುವುದು ಶ್ಲಾಘನೀಯ. ಪೊಲೀಸರ ಈ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಲಿ ಎಂದರು.

ಜಿಲ್ಲೆಯಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಯುತ್ತಿರುವ ಕೃತ್ಯ ಖಂಡನೀಯ. ಇಂತಹ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್, ಕಾರ್ಯಾಚರಣೆಯ ಹಿಂದೆ ಇಡೀ ಪೊಲೀಸ್ ತಂಡದ ಶ್ರಮವಿದೆ. ಅಧಿಕಾರಿಗಳು ಘಟನೆ ನಡೆದ ಬಳಿಕ ಎರಡು ದಿನ ನಿದ್ದೆಬಿಟ್ಟು ಕೆಲಸ ಮಾಡಿದ್ದಾರೆ. ಎಲ್ಲರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದರು.

ಈ ಸಂಧರ್ಭದಲ್ಲಿ ಮೇಯರ್ ದಿವಾಕರ್, ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಇನ್‌ಸ್ಪೆಕ್ಟರ್ ಸಂದೇಶ್, ಎಸ್ಸೈಗಳಾದ ನಂದಕುಮಾರ್, ರವಿ ಬಿ.ಎಸ್., ಪವನ್, ಈರಯ್ಯ, ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ್ ಶೇಣವ ಉಪಸ್ಥಿತರಿದ್ದರು.

Spread the love
  • Related Posts

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ…

    Spread the love

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    Ujire: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ” ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ