ಕ್ವಾರಂಟೈನ್ ನಲ್ಲಿದ್ದ ಹತ್ತನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು! ಕೋಟಾದ ಸಾಲಿಗ್ರಾಮದಲ್ಲಿ ನಡೆದ ದುರ್ಘಟನೆ!

ಕೋಟ: ಉಡುಪಿ ಜಿಲ್ಲೆಯ ಸಾಲಿಗ್ರಾಮದ ಮಾಣಿಕಟ್ಟಿನಲ್ಲಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ.

ಕೋಟದ ವಿವೇಕ ಬಾಲಕರ ಪ್ರೌಢಶಾಲೆಯ sslc ವಿದ್ಯಾರ್ಥಿಯಾಗಿದ್ದು ಇತ್ತೀಚಿಗೆ ತಾಯಿ ಮನೆಗೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕೊರೋನಾ ಪತ್ತೆಯಾಗಿತ್ತು.

READ ALSO

ಈ ಹಿನ್ನಲೆಯಲ್ಲಿ ತಾಯಿ ಮತ್ತು ಮಗನಿಗೆ ಹೋಂ ಕ್ವಾರಂಟೈನ್ ಹಾಕಲಾಗಿತ್ತು. ಇದೇ ವಿಚಾರವಾಗಿ ಮನನೊಂದು ಈತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. 

ಮೃತನ ಕೊವೀಡ್ ವರದಿ ಬಂದ ಬಳಿಕವೇ ಶವ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಾಗುವ ಸಾದ್ಯತೆ ಇದೆ, ಕೋಟ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.