KPCC ವಕ್ತಾರರಾಗಿ ವಿನಯ್ ಕುಮಾರ್ ಸೊರಕೆ ನೇಮಕ

ಉಡುಪಿ: ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾಧ್ಯಮಗಳಲ್ಲಿ ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಿರುವುದು ಅತ್ಯಂತ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ತಮಗಿರುವ ಅನುಭವ ತಿಳಿವಳಿಕೆಗಳ ಹಿನ್ನೆಲೆಯಲ್ಲಿ ನಿಮ್ಮನ್ನು ಕೆಪಿಸಿಸಿ ವಕ್ತಾರರಾಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

READ ALSO