ಮಂಗಳೂರು: ಕೃಷ್ಣಮೃಗದ ಚರ್ಮ ಮಾರಾಟ ಮಾಡುತ್ತಿದ್ದ ತಂಡವೊಂದನ್ನು ಮಂಗಳೂರಿನ ಅರಣ್ಯ ಸಂಚಾರಿ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು, ಖಚಿತ ಮಾಹಿತಿ ಮೇರೆಗೆ ಯಾದಗಿರಿಗೆ ತೆರಳಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳ ಸಹಿತ ಸೊತ್ತುಗಳನ್ನು ವಶಕ್ಕೆ ಪಡೆದಿದ್ದು, ಸ್ಥಳೀಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ಬಂಧಿತ ಆರೋಪಗಳಿಂದ 20 ಕೃಷ್ಣಮೃಗದ ಚರ್ಮ, 2 ಕೃಷ್ಣ ಮೃಗದ ರುಂಡ, ಜೀವಂತ ಹೆಣ್ಣು ಮರಿ ಹಾಗೂ ದಂಧೆಗೆ ಬಳಸಿದ ಮೂರು ಬೈಕ್ ಸೇರಿದಂತೆ ಆರು ಮಂದಿ ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಮಂಗಳೂರು ಫಾರೆಸ್ಟ್ ಸ್ಕ್ವಾಡ್ ನ ಸಬ್ ಇನ್ಸ್‌ಪೆಕ್ಟರ್ ಪುರುಷೋತ್ತಮ, ಹೆಡ್ ಕಾನ್ಸ್‌ಟೇಬಲ್ ಜಗನ್ನಾಥ, ಸಿಬ್ಬಂದಿಗಳಾದ ಪ್ರವೀಣ್ ಜೆ, ಉದಯ ಕುಮಾರ್, ಮಹೇಶ್, ಶಿವಾನಂದ ಜಗದೀಶ್ ಉಪಸ್ಥಿತರಿದ್ದರು.