ರಾಜ್ಯ ‘ಸರ್ಕಾರಿ ನೌಕರ’ರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ‘ಬಯೋ ಮೆಟ್ರಿಕ್ ಹಾಜರಾತಿ’ಯಿಂದ ವಿನಾಯ್ತಿ – ರಾಜ್ಯ ಸರ್ಕಾರದ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಹೆಚ್ಚಳದ ಸಂದರ್ಭದಲ್ಲಿ, ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದ ದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಯೋ ಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಆಡಳಿತ ಸುಧಾರಣೆ)ಯ ಸರ್ಕಾರದ ಉಪ ಕಾರ್ಯದರ್ಶಿ ಬಿ ಎಸ್ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದೆಲ್ಲಡೆ ಕೋವಿಡ್-19ರ 2ನೇ ಅಲೆಯು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದ ದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬಯೋಮೆಟ್ರಿಕ್ ಹಾಜರಾತಿ ನಮೂದಿಸುವಲ್ಲಿ ವಿನಾಯಿತಿ ನೀಡಲಾಗಿದೆ.

READ ALSO

ಆಯಾ ಇಲಾಖೆಗಳ ಮೇಲಿನ ಅಧಿಕಾರಿಗಳ ಸೂಚನೆಯಂತೆ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿ, ಸಿಬ್ಬಂದಿಗಳು ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡುವಂತೆ ಸೂಚಿಸಿದ್ದಾರೆ.