ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ಕಿರುಕುಳ, ಆರ್ಥಿಕ ಮುಗ್ಗಟ್ಟು, ಮಾನಸಿಕ ಹಿಂಸೆ, ಅತಿಯಾದ ಒತ್ತಡ, ಕೌಟುಂಬಿಕ ಕಲಹಕ್ಕೆ ಬಲಿಯಾಯಿತೇ ಬಡಜೀವ!

ಮಂಗಳೂರು: ಆರ್ಥಿಕ ಮುಗ್ಗಟ್ಟು, ಅಧಿಕಾರಿಗಳ ಕಿರುಕುಳ, ಮಾನಸಿಕ ಹಿಂಸೆ, ಅತಿಯಾದ ಒತ್ತಡ, ಕೌಟುಂಬಿಕ ಕಲಹ, ಮಗುವಿನ ಅನಾರೋಗ್ಯದಿಂದ ಬೆಸೆತ್ತು ಕೆಎಸ್ಆರ್ ಟಿಸಿ ಚಾಲಕ/ನಿರ್ವಾಹಕರೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಜೊತೆಗೆ ಅಧಿಕಾರಿಗಳು ಮಾನಸಿಕ ಹಿಂಸೆ ನೀಡುವುದರಿಂದಾಗಿ ಅತಿಯಾದ ಕೆಲಸದ ಒತ್ತಡಕ್ಕೆ ಒಳಗಾಗಿದ್ದರು. ಸಾಲದಕ್ಕೆ ಕೌಟುಂಬಿಕ ಸಮಸ್ಯೆಯ ಜೊತೆಗೆ ಮಗುವಿನ ಅನಾರೋಗ್ಯ ಬಾಲಕೃಷ್ಣ ಅವರನ್ನು ಚಿಂತಿಗೀಡು ಮಾಡಿತ್ತು ಎನ್ನಲಾಗುತ್ತಿದೆ.

ಮೃತರನ್ನು ಬಂಟ್ವಾಳ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಸ್ಆರ್ ಟಿಸಿ ಚಾಲಕ/ನಿರ್ವಾಹಕ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು, ಇವರು ಆತ್ಮಹತ್ಯೆಗೆ ಮೊದಲು ಡೆತ್ ನೋಟ್‌ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಡೆತ್ ನೋಟ್ ನಲ್ಲಿ ತನ್ನ ಸಹೋದರನ ವಿರುದ್ಧ ಅಸಮಾಧಾನ ಹೊರಹಾಕಿರುವ ಬಾಲಕೃಷ್ಣ ಅವರು ಕೆಎಸ್ ಆರ್ ಟಿಸಿ ಸಂಸ್ಥೆಯಲ್ಲಿ ನಿರಂತರ ಕಿರುಕುಳ ನೀಡುತ್ತಿದ್ದ ಬಗ್ಗೆ ಉಲ್ಲೇಖಿಸಿದ್ದಾರೆ. ಸಂಸ್ಥೆ ತನ್ನನ್ನು ಬದುಕಲು ಬಿಡುತ್ತಿಲ್ಲ, ಅಧಿಕಾರಿಗಳು ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಬರೆದಿರುವ ಅವರು , ನನ್ನ ಮಕ್ಕಳು ಹಾಗು ತಾಯಿಯನ್ನು ಒಳ್ಳೆಯದರಲ್ಲಿ ನೋಡಿಕೊಳ್ಳಿ ಎಂದ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 87 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 210 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 35 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 25 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 21 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 48 views