ಬೆಂಗಳೂರು: ಸರಕಾರಿ ಬಸ್ ಮತ್ತು ಸಚಿವರ ಕಾಡು ನಡುವೆ ಡಿಕ್ಕಿ ಸಂಭವಿಸಿದ್ದು, ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪಾರಾಗಿದ್ದಾರೆ.
ಬೆಂಗಳೂರಿನ ಬಿಡದಿ ಬಳಿ ರಸ್ತೆ ದಾಟುವಾಗ ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಸರಕಾರಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸಚಿವ ಕೋಟ ಶ್ರೀನಿವಾಸ್ ಮತ್ತು ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.
ಬೆಂಗಳೂರು ಹೊರವಲಯದ ಬಿಡದಿ ಬಳಿ ನೈಸ್ ರಸ್ತೆಯಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಕಾರನ್ನು ತಿರುಗಿಸುತ್ತಿದ್ದಾಗ ಕೆಎಸ್ಸಾರ್ಟಿಸ್ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಹಾನಿಯಾಗಿದೆ.
ಕುಂಬಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.