ರಾಜ್ಯ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಲು ಮುಂದಾಯ್ತಾ ಸಾರಿಗೆ ಸಂಸ್ಥೆ!ಮುಷ್ಕರ ನಡೆಸಿದರೆ ವೇತನ ಕಡಿತದ ಎಚ್ಚರಿಕೆ!

ಬೆಂಗಳೂರು : ರಾಜ್ಯ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದು, ಏಪ್ರಿಲ್ 7 ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಂದಿನಿಂದ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಕಡಿತ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳು, ಅಗತ್ಯ ಸೇವಾ ನಿರ್ವಹಣಾ ಕಾಯ್ದೆ 2013 ರ ಅಡಿ ಬರುವುದರಿಂ ರಾಜ್ಯ ಸರ್ಕಾರದ ಅಧಿಸೂಚನೆ ಅನ್ವಯ ಮುಷ್ಕರ ನಿರ್ಬಂಧಿಸಲಾಗಿದೆ. ಹೀಗಾಗಿ ಸಂಸ್ಥೆಯ ನೌಕರರು ಮುಷ್ಕರ ಮಾಡುವಂತಿಲ್ಲ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ನಿರ್ದೇಶನ ನೀಡಿದ್ದಾರೆ.

READ ALSO

ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದು ರಾಜ್ಯ ಸರ್ಕಾರ ಬಿಂಬಿಸುತ್ತಿದೆ. ಆದರೆ ವಾಸ್ತವದಲ್ಲಿ ಹಳೇ ಆದೇಶಗಳಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿ ಏಕಪಕ್ಷೀಯವಾಗಿ ಸುತ್ತೋಲೆ ಹೊರಡಿಸಿದೆ. ಇದರಿಂದ ಸಾರಿಗೆ ನೌಕರರಿಎ ಅನುಕೂಲಕ್ಕಿಂತ ಅನನೂಕೂಲವೇ ಹೆಚ್ಚಾಗಿದೆ. ಹೀಗಾಗಿ ಏಪ್ರಿಲ್ 7 ರಂದು ಕರೆ ನೀಡಿರುವ ಅನಿರ್ದಿಷ್ಟಾವಧಿ ಸಾರಿಗೆ ನೌಕರರ ಮುಷ್ಕರ ಖಚಿತ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.