
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಸಾರಿಗೆ ಸಂಪರ್ಕದ ಸಮಸ್ಯೆ ಶಾಲಾಕಾಲೇಜುಗಳ ಸಮಸ್ಯೆ ಪರಿಹಾರಕ್ಕೆ ಬೆಳ್ತಂಗಡಿ ಶಾಸಕರು ದಿನಾಂಕ 01-07-2024ರ ಅಪರಾಹ್ನ 2.30 ಗಂಟೆಗೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಭಾಭವನದಲ್ಲಿ ಕೆ.ಎಸ್.ಆರ್.ಟಿ.ಸಿ ಇಲಾಖೆಗೆ ಸಂಬಂಧ ಪಟ್ಟಂತೆ ವತಿಯಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಾಗಾರ ಜನಸ್ಪಂದನ ಕಾರ್ಯಕ್ರಮ ನಡೆಸಲು ಅವಕಾಶ ಕಲ್ಪಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
