ಮುಷ್ಕರನಿರತ ರಾಜ್ಯರಸ್ತೆ ಸಾರಿಗೆ ನೌಕರಿಗೆ ಬಿಗ್ ಶಾಕ್ ನೀಡಲು ಮುಂದಾದ ರಾಜ್ಯಸರ್ಕಾರ! ಪ್ರತಿಭಟನೆ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಎಸ್ಮಾ ಜಾರಿಗೆ ಚಿಂತನೆ!

ಬೆಂಗಳೂರು: ಮುಷ್ಕರ ನಿರತ ರಾಜ್ಯರಸ್ತೆ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಬಿಗ್‌ ಶಾಕ್‌ ನೀಡಲು ಮುಂದಾಗಿದ್ದು, ಒಂದು ವೇಳೆ ನಾಳೆಯೊಳಗೆ ಕೆಲಸಕ್ಕೆ ಹಾಜರಾಗದಿದ್ದಲ್ಲಿ ಎಸ್ಮಾ ಜಾರಿಗೆ ತರಲು ಮುಂದಾಗಿದೆ ಎನ್ನಲಾಗಿದೆ.

ಎಸ್ಮಾ ಎಂದರೇನು? ಅಗತ್ಯ ಸೇವೆ ನಿರ್ವಹಣೆ ಕಾಯಿದೆ (Essential Services Maintenance Act) (ESMA) ಎನ್ನುವುದು ಕೆಲವು ಸೇವೆಗಳ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಸ್ಥಾಪಿಸಲಾದ ಭಾರತದ ಸಂಸತ್ತಿನ ಒಂದು ಕಾರ್ಯವಾಗಿದೆ.

READ ALSO

ಎಸ್ಮಾ ಜಾರಿ ಹೇಗೆ ಮಾಡಲಾಗುತ್ತದೆ? : ಸರ್ಕಾರಿ ನೌಕರರು ಸಾಮೂಹಿಕ ಪ್ರತಿಭಟನೆಗೆ ಮುಂದಾಗಿ ಪರಿಸ್ಥಿತಿ ಸಂಪೂರ್ಣ ಕೈ ಮೀರಿ ಹೋಗುತ್ತಿದೆ ಎಂಬ ಸಂದರ್ಭದಲ್ಲಿ ಸರ್ಕಾರ ಎಸ್ಮಾ ಜಾರಿ ಮಾಡಲು ಮುಂದಾಗುತ್ತದೆ.

ಮೂಲ ಸೌಕರ್ಯಗಳಾದ ಆಹಾರ, ಭದ್ರತೆ, ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆಗೆ ಭಂಗ ಬರುವ ಸಂಭವ ಹೆಚ್ಚಿದೆ ಎಂದಾಗ ಸರ್ಕಾರ ಎಸ್ಮಾ ಜಾರಿಗೆ ಮುಂದಾಗುತ್ತದೆ.

ಎಸ್ಮಾ ಜಾರಿ ಪರಿಣಾಮ ಏನು : ಎಸ್ಮಾ ಎಂದರೆ ‘ಕಡ್ಡಾಯ ಕೆಲಸ’ ಎಂಬ ಅರ್ಥ ಬರುತ್ತದೆ. ಸಂವಿಧಾನ ಅನುಸೂಚಿ 7ರಲ್ಲಿನ 2ನೇ ಪಟ್ಟಿಯಲ್ಲಿರುವ ‘ಸಾರ್ವಜನಿಕ ಸುವ್ಯವಸ್ಥೆ’ ಮತ್ತು ‘ಪೊಲೀಸ್’ ಸಂಬಂಧಿಸಿದ ಎಲ್ಲಾ ಸೇವೆಗಳ ಕುರಿತು ರಾಜ್ಯ ಶಾಸಕಾಂಗವು ಕಾನೂನು ರೂಪಿಸುವ ಅಧಿಕಾರ ಹೊಂದಿರುತ್ತದೆ. ಎಸ್ಮಾ ಕಾಯ್ದೆ ಉಲ್ಲಂಘನೆ ಮಾಡಿದರೆ ವಾರಂಟ್ ಇಲ್ಲದೇ ಬಂಧನ ಮಾಡಬಹುದು. ಅಲ್ಲದೆ ಆರು ತಿಂಗಳು ಜೈಲು ವಾಸ ಸಾಧ್ಯತೆಯೂ ಇರುತ್ತದೆ. ಎಸ್ಮಾ ಜಾರಿಯಾದ ಮೇಲೂ ಉದ್ಯೋಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಆತನ ವೇತನ, ಭತ್ಯೆ, ಬಡ್ತಿ ಮತ್ತು ಇತರ ಸವಲತ್ತುಗಳ ಮೇಲೆ ಪರಿಣಾಮ ಉಂಟಾಗುತ್ತದೆ