ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೊರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್ ಎಂಬಾತನೇ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು ಆತನ ವಿರುದ್ದ ಪ್ರಕರಣ‌ ದಾಖಲಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬಲ್ತಾರ ಎಂಬಲ್ಲಿ ವನ್ಯಜೀವಿ ವಿಭಾಗಕ್ಕೆ ಸೇರಿದ ಕಾಡಿನೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಹಲಸಿನ ಮರಗಳನ್ನು ಕಡಿದು ದಾಸ್ತಾನು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿ ಶರ್ಮಿಷ್ಠಾ ನೇತೃತ್ವದ ತಂಡ ಅ.13 ರಂದು ಸ್ಥಳಕ್ಕೆ ದಾಳಿ ಮಾಡಿದ್ದಾರೆ‌.ದಾಳಿ ವೇಳೆ 6 ಹಲಸಿನ ಮರದ ತುಂಡುಗಳು ಹಾಗೂ ಒಂದು ಹಲಸಿನ ಮರದ ದಿಮ್ಮಿಯನ್ನು ಸ್ಥಳದಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ.

ಇಲಾಖೆಯವರು ಬೆಳ್ತಂಗಡಿ ನ್ಯಾಯಾಲಯದ ಅನುಮತಿ ಪಡೆದುಕೊಂಡು ಅ.14 ರಂದು ವನ್ಯಜೀವಿ ರಕ್ಷಣೆ ಕಾಯ್ದೆ 27,29,35,50,51,55 ಅಡಿಯಲ್ಲಿಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೊರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಇತರರು ಭಾಗಿಗಳಾಗಿರುವ ಅನುಮಾನವಿದ್ದು ಎಸಿಎಫ್ ನೇತೃತ್ವದಲ್ಲಿ ಪ್ರಕರಣದ‌ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Spread the love
  • Related Posts

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

    Spread the love

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಸೌದಿ ಅರೇಬಿಯಾದ ರಾಜಧಾನಿ ರಿಯಾಧ್‌ನಲ್ಲಿರುವ ಪ್ರಮುಖ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ(Saudi airport) ಮೇಲೆ ಹೌತಿ ಬಂಡುಕೋರರು(Houthi Terrorists) ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ (Missile attack) 12 ಜನರು ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ…

    Spread the love

    You Missed

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 2 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 4 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 5 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 10 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 11 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ