ಕಾರ್ಕಳ: ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪವೊಂದು ಕೇಳಿ ಬಂದಿರುವ ಕುರಿತು ವರದಿಯಾಗಿದೆ. ಕುಕ್ಕುಂದೂರು ಗ್ರಾಮದಲ್ಲಿ ಯುವತಿಯೋರ್ವಳಿಗೆ ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ 21 ವರ್ಷದ ಯುವತಿಯನ್ನು ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಶುಕ್ರವಾರ ಸಂಜೆ 7 ಗಂಟೆಯ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಆಸ್ಪತ್ರೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದು, ಪ್ರಮುಖ ಆರೋಪಿ ಅಲ್ತಾಫ್ ಹಾಗೂ ಸುಬೇರ್ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಬಗ್ಗೆ ಮಾಹಿತಿ ಲಭ್ಯವಾಗಿದೆ.