ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುರಿದ ‌‌ಭಾರಿ ಮಳೆ ಹೊರ ಜಿಲ್ಲೆಗಳಿಂದ ಭಕ್ತರು ಬರದಂತೆ ದ.ಕ ಜಿಲ್ಲಾಡಳಿತ ಸೂಚನೆ

ಸುಬ್ರಹ್ಮಣ್ಯ: ಭಾರಿ ಮಳೆ ಸುರಿಯುತ್ತಿರುವ ಕಾರಣ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಮುಂದಿನ 2 ದಿನಗಳ ಕಾಲ ಹೊರ ಜಿಲ್ಲೆಗಳ ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಈಗಾಗಲೇ ಕುಮಾರಧಾರ ನದಿ ಉಕ್ಕಿ ಹರಿದು ಆದಿ ಸುಬ್ರಹ್ಮಣ್ಯ ದೇವಾಲಯಕ್ಕೆ ನೀರು ನುಗ್ಗಿದ್ದು ನಾಗರ ಪಂಚಮಿಯ ಶುಭಾವಸರದಲ್ಲಿ ದೇವಾಲಯಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 2 ಮತ್ತು 3 ರಂದು ಜಿಲ್ಲಾಡಳಿತ ಭೇಟಿ ನೀಡದಂತೆ ಮನವಿ ಮಾಡಿದೆ.

READ ALSO

ಇನ್ನೂ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಭಕ್ತರು ದೇವಾಲಯಕ್ಕೆ ತೆರಳಿದರೆ ಸಮಸ್ಯೆಗೆ ಸಿಲುಕುವ ಸಾಧ್ಯತೆಗಳಿವೆ.