ನವದೆಹಲಿ: ಭಾರತ ಮತ್ತು ಚೀನಾ ನಡುವಿನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಚೀನಾ ಮತ್ತೆ ಖ್ಯಾತೆ ತೆಗೆದಿದ್ದು, ಭಾರತದ ಭೂ ಭಾಗ ಆಕ್ರಮಿಸಲು ಚೀನಾ ಯೋಧರ ಮುಂದಾಗಿದ್ದರು ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಸಿಕ್ಕಿಂನ ನಾಥು ಲಾದಲ್ಲಿ ಭಾರತೀಯ ಸೇನೆ ಮತ್ತು ಚೀನಾದ ಪಿಎಲ್ ಎ ನಡುವೆ ಈ ಘರ್ಷಣೆ ನಡೆದಿದ್ದು, ಎರಡೂ ಕಡೆಯ ಸೈನಿಕರು ಗಾಯಗೊಂಡಿದ್ದಾರೆ. ಭಾರತೀಯ ಭೂಪ್ರದೇಶವನ್ನ ಪ್ರವೇಶಿಸಲು ಪಿ.ಎಲ್.ಎ ಗಸ್ತು ಪಡೆ ಪ್ರಯತ್ನಿಸುತ್ತಿದ್ದು, ಈ ವೇಳೆ ತಡೆಯಲು ಬಂದ ಭಾರತೀಯ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಪ್ರತಿದಾಳಿ ನಡೆಸಿದ್ದಾರೆ. ಇದ್ರಲ್ಲಿ ಚೀನಾದ 20 ಸೈನಿಕರ ಗಾಯಗಳಾಗಿವೆ ಎನ್ನುವ ಮಾಹಿತಿ ನೀಡಿದೆ. ಇನ್ನು ಇದ್ರಲ್ಲಿ ಮೂವರು ಭಾರತೀಯ ಯೋಧರು ಗಾಯಾಳುಗಳಾಗಿದ್ದಾರೆ.