ಹಡಿಲು ಭೂಮಿ ಕೃಷಿ ಅಭಿಯಾನ ಒಂದು ಆಂದೋಲನವಾಗಿ ಮಾರ್ಪಾಡಾಗಿದೆ : ಶಾಸಕ ಕೆ.ರಘುಪತಿ ಭಟ್

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಬಿಟ್ಟಿರುವ ಕೃಷಿ ಭೂಮಿಗಳಲ್ಲಿ ಕೃಷಿ ಮಾಡುವ ಸಂಕಲ್ಪದೊಂದಿಗೆ ಆರಂಭಿಸಿರುವ “ಹಡಿಲು ಭೂಮಿ ಕೃಷಿ ಅಭಿಯಾನ” ಇಂದು ಬೃಹತ್ ಆಂದೋಲನವಾಗಿ ಮಾರ್ಪಾಡಾಗಿದೆ. ಕ್ಷೇತ್ರದ ವಾರ್ಡ್ ವಾರ್ಡ್ ಗಳಲ್ಲಿ, ಗ್ರಾಮ ಗ್ರಾಮಗಳಲ್ಲಿ ಜನಪ್ರತಿನಿಧಿಗಳು, ಯುವಕರು, ಕೃಷಿಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಅತ್ಯಂತ ಕ್ರಿಯಾಶೀಲತೆಯಿಂದ ಸಂಪೂರ್ಣವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದು ಈ ಆಂದೋಲನದ ಫಲಶ್ರುತಿ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ರಘುಪತಿ ಭಟ್ ಹೇಳಿದರು.

ಅವರು ಹಡಿಲು ಭೂಮಿ ಕೃಷಿ ಅಭಿಯಾನದಡಿ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ಗ್ರಾಮದಲ್ಲಿ 20 ಎಕ್ರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

READ ALSO

ಉಡುಪಿಯನ್ನು ಹಡಿಲು ಭೂಮಿ ಮುಕ್ತವನ್ನಾಗಿಸುವುದು ನಮ್ಮ ಈ ಅಭಿಯಾನದ ಸದುದ್ದೇಶ. ಇಲ್ಲಿ ಲಾಭ ನಷ್ಟದ ಲೆಕ್ಕಾಚಾರವಿರುವುದಿಲ್ಲ. ಯಾವುದೇ ಕ್ರಿಮಿನಾಶಕ ರಾಸಾಯನಿಕ ಸಿಂಪಡಿಕೆ ಬಳಸದೆ ವಿಷಮುಕ್ತ ಸಾವಯವ ಕೃಷಿ ಮಾಡಲಾಗುವುದು. ದೊರೆಯುವ ಇಳುವರಿಗೆ ದೇಶದಾದ್ಯಂತ ಹೊಸ ಮಾದರಿಯ ವ್ಯಾಪಾರ ನೀತಿಯನ್ನು ಸೃಷ್ಟಿಸಿ ಮಾರಾಟ ಮಾಡುವ ಉದ್ದೇಶವಿದೆ. ಈ ಪ್ರಕ್ರಿಯೆಯಿಂದ ಮುಂದಿನ ದಿನಗಳಲ್ಲಿ ಎಲ್ಲಾ ರೈತರಿಗೂ ಅನುಕೂಲವಾಗಬೇಕು ಎಂದು ಹೇಳಿದ ಅವರು ಮುಂದಿನ ವರ್ಷದಿಂದ ರೈತರೇ ಅವರ ಕೃಷಿ ಭೂಮಿಗಳಲ್ಲಿ ಕೃಷಿ ಮಾಡಲು ಬೇಕಾದ ಸಹಕಾರವನ್ನು ಟ್ರಸ್ಟ್ ಮುಖಾಂತರ ನೀಡಲಾಗುವುದು ಎಂದರು.

ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹಾಗೂ ಶಾಸಕ ಕೆ.ರಘುಪತಿ ಭಟ್ ಭೂ ಮಾತೆಗೆ ಹಾಲನ್ನು ಎರೆಯುವ ಮೂಲಕ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಶುಭಾಂಶನೆಗೈದು ಮಾತನಾಡಿ, ಇಂದು ಅಳಿದುಳಿದು ಹಡಿಲು ಬಿದ್ದಿರುವ ಕೃಷಿ ಭೂಮಿಯಲ್ಲಿ ಕೃಷಿ ಕಾರ್ಯ ಮಾಡುವ ಉದಾತ್ತ ಯೋಜನೆ ಸಕಾಲಿಕ ಮತ್ತು ಅರ್ಥಪೂರ್ಣ. ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಸ್ವಾವಲಂಬನೆಯ ಪ್ರತೀಕವಾಗಿದೆ. ಕೃಷಿಯು ಜೀವನೋಪಾಯದ ಜೊತೆಗೆ ಆರೋಗ್ಯ ಸಂವರ್ಧನೆಗೂ ಪೂರಕ. ಕೃಷಿ ಕ್ರಾಂತಿಗೆ ನಾಂದಿ ಹಾಡಿರುವ ಹಡಿಲು ಭೂಮಿ ಕೃಷಿ ಆಂದೋಲನ ಯಶಸ್ವಿಯಾಗಿ ಮುಂದುವರಿಯಲಿ. ಶಾಸಕರ ನೇತೃತ್ವದ ಈ ಅಭಿಯಾನದಲ್ಲಿ ಸಕ್ರಿಯವಾಗಿ ಕೈ ಜೋಡಿಸಿರುವ ಎಲ್ಲರ ಸಮರ್ಪಣಾಭಾವದ ಸೇವೆ ಪ್ರಶಂಸನೀಯ ಎಂದರು.

ಉಡುಪಿ ಜಿಲ್ಲಾ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ದಿನಕರ ಬಾಬು, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಎಮ್. ಅಂಚನ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಪಿಡಿಒ ವಸಂತಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ನಗರಸಭಾ ಸದಸ್ಯ ಹರೀಶ್ ಶೆಟ್ಟಿ ಅಂಬಲಪಾಡಿ, ಕೇದಾರೋತ್ಥಾನ ಟ್ರಸ್ಟ್(ರಿ.) ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್, ಅಂಗನವಾಡಿ ಕಾರ್ಯಕರ್ತೆ ಇಂದಿರಾ ರತ್ನಾಕರ್, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ಗೌರವ ಸಂಚಾಲಕ ಯೋಗೀಶ್ ಶೆಟ್ಟಿ, ಪ್ರಧಾನ ಸಂಚಾಲಕ ಶಿವಕುಮಾರ್ ಅಂಬಲಪಾಡಿ, ಗೌರವ ಸಲಹೆಗಾರರಾದ ರಾಜೇಂದ್ರ ಪಂದುಬೆಟ್ಟು, ಕೇಳು ನಾರಾಯಣ, ಸಹ ಸಂಚಾಲಕರಾದ ರಾಜೇಶ್ ಸುವರ್ಣ, ಮಹೇಂದ್ರ ಕೋಟ್ಯಾನ್, ಹರೀಶ್ ಆಚಾರ್ಯ, ಸುನಿಲ್ ಕುಮಾರ್, ವಿನೋದ್ ಪೂಜಾರಿ, ಅನಿಲ್ ರಾಜ್ ಅಂಚನ್, ಸುರೇಶ್ ಶೆಟ್ಟಿ, ಶರತ್ ಶೆಟ್ಟಿ ಹಾಗೂ ಸ್ಥಳೀಯ ಕಾರ್ಯಕರ್ತರಾದ ಗಿರೀಶ್ ಅಮೀನ್, ಶಿವಾಜಿ ಸನಿಲ್, ನಿತಿನ್ ಕುಮಾರ್, ರಾಧಾಕೃಷ್ಣ, ಕುಸುಮ, ಕೀರ್ತನ, ವಾಣಿ, ರಂಜಿತಾ ಹಾಗೂ ಗದ್ದೆಗಳ ಮಾಲಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.