ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

ನವದೆಹಲಿ (ಮಾ.27): ದೇಶದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗುತ್ತೆ ಅನ್ನೋ ಸುದ್ದಿ ಹಬ್ಬಿದೆ. ಆದರೆ, ಕೇಂದ್ರ ಸರ್ಕಾರ ಈ ವದಂತಿಗಳನ್ನು ತಳ್ಳಿಹಾಕಿದೆ. ದೇಶದಲ್ಲಿ ಯಾವುದೇ ಕಾರಣಕ್ಕೂ ಲಾಕ್‌ಡೌನ್ ಇರುವುದಿಲ್ಲ, ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸ್ಪಷ್ಟಪಡಿಸಿದೆ.

ಸದ್ಯಕ್ಕೆ ಲಾಕ್‌ಡೌನ್ ಮಾಡುವಂತಹ ಯಾವುದೇ ಪರಿಸ್ಥಿತಿ ದೇಶದಲ್ಲಿ ಇಲ್ಲ, ಹರಿದಾಡುತ್ತಿರುವ ಸುದ್ದಿಗಳು ಆಧಾರರಹಿತ ಎಂದು ಸರ್ಕಾರ ತಿಳಿಸಿದೆ.

ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಆಗಲಿದೆ ಎಂಬ ಸುದ್ದಿ ಜನರಲ್ಲಿ ಹೆಚ್ಚು ಗೊಂದಲ ಸೃಷ್ಟಿಸಿತ್ತು. ಪಶ್ಚಿಮ ಏಷ್ಯಾ ಯುದ್ಧದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನ ಎರಡೂ ಸದನಗಳಲ್ಲಿ ಇತ್ತೀಚೆಗೆ ಮಾತನಾಡಿದ್ದರು. ‘ಒಂದು ವೇಳೆ ಯುದ್ಧ ದೀರ್ಘಕಾಲ ಮುಂದುವರಿದರೆ, ದೇಶದ ಮೇಲೆ ದೊಡ್ಡ ಪರಿಣಾಮ ಬೀರಬಹುದು. ಆಗ ಲಾಕ್‌ಡೌನ್ ಸಮಯದಲ್ಲಿ ಇದ್ದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಈ ಸಂಕಷ್ಟವನ್ನು ಎದುರಿಸಬೇಕು’ ಎಂದು ಅವರು ಹೇಳಿದ್ದರು.

ಪ್ರಧಾನಿಯವರ ಈ ಹೇಳಿಕೆಯನ್ನೇ ಕೆಲವರು ತಪ್ಪಾಗಿ ಅರ್ಥೈಸಿಕೊಂಡು, ದೇಶದಲ್ಲಿ ಮತ್ತೊಂದು ಲಾಕ್‌ಡೌನ್‌ಗೆ ಸಿದ್ಧತೆ ನಡೆಯುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿಸಿದ್ದರು. ಆದರೆ, ಕೇಂದ್ರ ಪೆಟ್ರೋಲಿಯಂ ಸಚಿವರು ಈ ಎಲ್ಲಾ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ‘ದೇಶದಲ್ಲಿ ಯಾವುದೇ ರೀತಿಯ ಲಾಕ್‌ಡೌನ್ ಜಾರಿ ಮಾಡುವ ಯೋಚನೆ ಸದ್ಯಕ್ಕೆ ಸರ್ಕಾರಕ್ಕಿಲ್ಲ. ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಪೂರೈಕೆಯನ್ನು ಸರ್ಕಾರ ಖಚಿತಪಡಿಸುತ್ತಿದೆ. ಜನರು ಗಾಬರಿಯಾಗಿ ವಸ್ತುಗಳನ್ನು ಖರೀದಿಸುವುದು ಅಥವಾ ಸುಳ್ಳು ಸುದ್ದಿಗಳನ್ನು ನಂಬುವುದು ಬೇಡ. ಸದ್ಯಕ್ಕೆ ಅಂತಹ ಯಾವುದೇ ಆತಂಕಕಾರಿ ಪರಿಸ್ಥಿತಿ ಇಲ್ಲ’ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 21 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ