ನೆಲ್ಲೂರು: ದೇವರ ದರ್ಶನ ಪಡೆದು ವಾಪಾಸಾಗುತ್ತಿದ್ದ ವೇಳೆಯಲ್ಲಿ ಲಾರಿ ಹಾಗೂ ಟೆಂಪೋ ನಡುವೆ ನಡೆದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.
ಮೃತಪಟ್ಟವರೆಲ್ಲರೂ ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಶ್ರೀಶೈಲಂ ದೇವಸ್ಥಾನಕ್ಕೆ ಭೇಟಿಕೊಟ್ಟು ಸುತ್ತಮುತ್ತಲಿನ ದೇವಾಲಯಕ್ಕೆ ಭೇಟಿ ನೀಡಲು ಹೋಗಿದ್ದರು. ದೇವರ ದರ್ಶನ ಪಡೆದು ವಾಪಾಸಾಗಿತ್ತಿದ್ದ ವೇಳೆಯಲ್ಲಿ ಬುಚ್ಚಿರೆಡಿಪಲೆಂ ಮಂಡಲಂ ದಾಮರಮಡುಗು ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ.
ದೇವರ ದರ್ಶನ ಪಡೆದು ಟೆಂಪೋದಲ್ಲಿ ಬರುತ್ತಿದ್ದಾಗ ಸರಕು ತುಂಬಿದ್ದ ಲಾರಿ ಢಿಕ್ಕಿ ಹೊಡೆದಿದೆ. ಅಪಘಾತ ದಲ್ಲಿ ಐವರು ಮಹಿಳೆಯರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದು ಇನ್ನು ಆರು ಮಂದಿ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.