‘ಲವ್ ಜಿಹಾದ್’ ಕುರಿತು ಕರಡು ಕಾನೂನಿನಲ್ಲಿ ಬಲವಂತದ ಮತಾಂತರಕ್ಕೆ ಐದು ವರ್ಷ ಜೈಲು!

ಹೊಸದಿಲ್ಲಿ : ಬಲವಂತದ ಮತಾಂತರದ ನಡೆದಿದೆ ಎಂದು ಕಂಡು ಬಂದರೆ ಮದುವೆಯನ್ನು ರದ್ದುಗೊಳಿಸಲು ಉದ್ದೇಶಿತ ಕಾನೂನಿನ ಕರಡನ್ನು ಉತ್ತರ ಪ್ರದೇಶ ಸರಕಾರವು ಸಿದ್ಧಪಡಿಸಿದೆ.

ಕರಡು ‘ಅಕ್ರಮ ಮತಾಂತರ ನಿಷೇಧ ಮಸೂದೆ 2020’ಲವ್ ಜಿಹಾದ್ ಅಥವಾ ಬಿಜೆಪಿ ನಾಯಕರು ಆಗಾಗ್ಗೆ ಹೇಳುವಂತೆ ಪ್ರೇಮ ಮತ್ತು ವಿವಾಹದ ಸೋಗಿನಲ್ಲಿ ಹಿಂದು ಮಹಿಳೆಯರನ್ನು ಇಸ್ಲಾಮ್‌ಗೆ ಮತಾಂತರಗೊಳಿಸುವ ‘ಒಳಸಂಚ ’ನ್ನು ಮಟ್ಟಹಾಕುವ ಉದ್ದೇಶವನ್ನು ಹೊಂದಿದೆ. ಕೆಲವೇ ದಿನಗಳ ಹಿಂದೆ ಉತ್ತರ ಪ್ರದೇಶ ಮತ್ತು ಕನಿಷ್ಠ ಮೂರು ಇತರ ಬಿಜೆಪಿ ಆಡಳಿತದ ರಾಜ್ಯಗಳು ಲವ್‌ಜಿಹಾದ್ ವಿರುದ್ಧ ಕಾನೂನನ್ನು ತರುವ ಭರವಸೆಯನ್ನು ನೀಡಿದ್ದವು.

ಕರಡು ಕಾನೂನನ್ನು ರೂಪಿಸಿರುವ ರಾಜ್ಯದ ಗೃಹ ಇಲಾಖೆಯು ಅದನ್ನು ಕಾನೂನು ಇಲಾಖೆಗೆ ಸಲ್ಲಿಸಿದೆ. ನೂತನ ಮಸೂದೆಯು ಶೀಘ್ರವೇ ರಾಜ್ಯ ಸಂಪುಟದ ಮುಂದೆ ಮಂಡನೆಯಾಗಲಿದೆ ಎಂದು ಹೇಳಲಾಗಿದೆ.

ಮದುವೆಯ ಮೂಲಕ ಸೇರಿದಂತೆ ಬಲವಂತದ ಮತಾಂತರಕ್ಕೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 15,000 ರೂ.ದಂಡವನ್ನು ಕರಡು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಮಹಿಳೆಯೋರ್ವಳು ಮದುವೆಗೆಂದೇ ಮತಾಂತರಗೊಂಡಿದ್ದರೆ ಮತ್ತು ಯಾರಾದರೂ ಪೊಲೀಸರಿಗೆ ದೂರು ನೀಡಿದರೆ ತನಿಖೆ ನಡೆಸಬೇಕಾಗುತ್ತದೆ. ಕಪಟದಿಂದ ಮತಾಂತರಗೊಳಿಸಿರುವುದು ತನಿಖೆಯಲ್ಲಿ ಕಂಡು ಬಂದರೆ ಮದುವೆಯನ್ನು ರದ್ದುಗೊಳಿಸಲಾಗುತ್ತದೆ. ಸಾಮೂಹಿಕ ಮತಾಂತರಕ್ಕೆ 10 ವರ್ಷಗಳ ಜೈಲು ಶಿಕ್ಷೆಯನ್ನೂ ಕರಡು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಈ ಮಸೂದೆಯಡಿ ಮತಾಂತರ ಜಾಮೀನುರಹಿತ ಅಪರಾಧವಾಗಲಿದೆ.

ನೂತನ ಕಾನೂನಿನಲ್ಲಿ ‘ಲವ್ ಜಿಹಾದ್ ’ಶಬ್ದವಿಲ್ಲದಿರುವುದನ್ನು ಪ್ರಸ್ತಾಪಿಸಿದ ಮಿತ್ತಲ್, ಮಾಧ್ಯಮಗಳು,ಸಾಮಾಜಿಕ ಜಾಲತಾಣಗಳು ಮತ್ತು ರಾಜಕಾರಣಿಗಳಿಂದ ಮಾತ್ರ ಈ ಶಬ್ದ ಬಳಕೆಯಾಗುತ್ತಿದೆ. ನೂತನ ಮಸೂದೆಯು ‘ಹಿಂದು-ಮುಸ್ಲಿಂ’ನೆಲೆಯಲ್ಲಿ ಮಾತ್ರ ಧಾರ್ಮಿಕ ಮತಾಂತರಗಳನ್ನು ಪರಿಗಣಿಸುವುದಿಲ್ಲ,ಅದು ಎಲ್ಲ ಧರ್ಮಗಳಿಗೂ ಅನ್ವಯವಾಗಲಿದೆ ಎಂದು ವಿವರಿಸಿದರು.

ಉದ್ದೇಶಿತ ಕಾನೂನಿನಲ್ಲಿ ಅಂತರ್ ಧರ್ಮೀಯ ವಿವಾಹಗಳಿಗೆ ನಿರ್ಬಂಧವಿಲ್ಲ. ಬಲವಂತದ, ಆಮಿಷವೊಡ್ಡುವ ಅಥವಾ ಮದುವೆಗಳ ಮೂಲಕ ಮತಾಂತರವನ್ನು ಅಪರಾಧವನ್ನಾಗಿಸುವುದು ಮಾತ್ರ ಕಾನೂನಿನ ಉದ್ದೇಶವಾಗಿದೆ. ಈ ಕಾನೂನಿನಡಿ ಧಾರ್ಮಿಕ ಮತಾಂತರಕ್ಕೆ ಅವಕಾಶವಿದೆ,ಆದರೆ ಬಲವಂತದ ಅಥವಾ ಆಮಿಷದ ಮೂಲಕ ಮತಾಂತರಕ್ಕೆ ಅವಕಾಶವಿಲ್ಲ ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಉತ್ತರ ಪ್ರದೇಶ ಕಾನೂನು ಆಯೋಗದ ಮುಖ್ಯಸ್ಥ ನ್ಯಾ. ಆದಿತ್ಯ ಮಿತ್ತಲ್ ತಿಳಿಸಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ