Manglore: ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಹೈಕೋರ್ಟ್ ನ್ಯಾಯಾಧೀಶರಾದ ಶ್ರೀ ನರೇಂದ್ರ ಪ್ರಸಾದ್ ರನ್ನು ಹೈಕೋರ್ಟ್ ನ್ಯಾಯವಾದಿ ಶ್ರೀ ಪಿ ಪಿ ಹೆಗ್ಡೆ ಯವರ ಜೊತೆ ಭೇಟಿಮಾಡಿ ದಕ್ಷಿಣ ಕನ್ನಡ ಜಿಲ್ಹಾ ವಕೀಲರ, ವಕೀಲರ ಭವನ ಮತ್ತು ನ್ಯಾಯಾಲಯಗಳ ಕುಂದುಕೊರತೆಗಳ ಬಗ್ಗೆ ಮಾತುಕತೆ ನಡೆಸಲಾಯಿತು. ಈ ಬಗ್ಗೆ ಆಡಳಿತಾತ್ಮಕ ನ್ಯಾಯಾಧೀಶರು ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ.
ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಸಂಘಟಿತವಾಗಿ ಚರ್ಚಿಸಿದ ಬಗ್ಗೆ ಅಭಿನಂದನೆಯನ್ನು ಸಲ್ಲಿಸಿದರು. ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಿಚಾರ್ಡ್ ಕೊಸ್ತಾ, ಜೊತೆ ಕಾರ್ಯದರ್ಶಿ ನವೀನ್ ಬಿ ಕೆ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಹೆಚ್ ವಿ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೆಚ್, ಉಪಾಧ್ಯಕ್ಷ ಸುಜಿತ್ ಕುಮಾರ್, ನ್ಯಾಯವಾದಿಗಳಾದ ಗಿರೀಶ್ ಶೆಟ್ಟಿ, ಪ್ರವೀಣ್ ಕುಮಾರ್ ಆದ್ಯಪಾಡಿ, ಚಂದ್ರಹಾಸ ಕೊಟ್ಟಾರಿ, ಬಂಟ್ವಾಳ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಭಂಡಾರಿ ಮತ್ತು ಮೂಡಬಿದ್ರೆ ವಕೀಲರ ಸಂಘದ ಅಧ್ಯಕ್ಷರಾದ ಹರೀಶ್ ಜೊತೆಗಿದ್ದರು.








