ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ

ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ ₹2 ಲಕ್ಷ ಅನುದಾನವನ್ನು ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಡಾ. ನವೀನ್ ಚಂದ್ರ ಶೆಟ್ಟಿಯವರು ದೇವಸ್ಥಾನ ಸಮಿತಿಗೆ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಗೆ ನಿರಂತರವಾಗಿ ಸಹಕಾರ ನೀಡುತ್ತಿದ್ದು, ಜೀರ್ಣಾವಸ್ಥೆಯಲ್ಲಿರುವ ದೇವಾಲಯಗಳ ಪುನರುಜ್ಜೀವನಕ್ಕೆ ವಿಶೇಷ ಆದ್ಯತೆ ನೀಡುತ್ತಿದೆ. “ದೇವಸ್ಥಾನವು ಕೇವಲ ಪೂಜಾ ಸ್ಥಳವಾಗಿ ಉಳಿಯದೆ, ಇಲ್ಲಿ ಭಜನಾ ತಂಡವನ್ನು ಪ್ರಾರಂಭಿಸಿ ನಿತ್ಯ ಭಜನೆ ಹಾಗೂ ಧಾರ್ಮಿಕ ಚಟುವಟಿಕೆಗಳನ್ನು ನಡೆಸಬೇಕು. ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಮತ್ತು ಭಕ್ತಿಯ ಸಾರವನ್ನು ಬಿತ್ತುವ ಕಾರ್ಯ ದೇವಸ್ಥಾನದ ಮೂಲಕ ನಡೆಯಬೇಕು.

ಇಂತಹ ಕಾರ್ಯಗಳಿಂದ ಸಮಾಜದಲ್ಲಿ ನೈತಿಕ ಮೌಲ್ಯಗಳು ಬೆಳೆದು ಸದೃಢ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ” ಈ ಅನುದಾನವನ್ನು ಸದುಪಯೋಗಪಡಿಸಿಕೊಂಡು ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಅಲ್ಲದೆ, ದೇವಸ್ಥಾನದಲ್ಲಿ ನಿತ್ಯ ಭಜನೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮಕ್ಕಳಿಗೆ ಸಂಸ್ಕಾರ ಶಿಕ್ಷಣ ನೀಡುವ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ರಾಜೇಶ.ಎಂ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಗಿರೀಶ್ ಹಾಗೂ ಮಂಜುನಾಥ್, ಮಡಬಲು ಕಾರ್ಯಕ್ಷೇತ್ರದ ಗಣ್ಯರಾದ ಮಂಜುನಾಥ್, ಉದಯ್ ಕುಮಾರ್, ಶಿವರಾಜ್, ರಮೇಶ್, ಲಕ್ಷ್ಮಣ್, ಸುಂದರೆಗೌಡ, ಅಮೃತೇಗೌಡ, ಮಂಜೇಗೌಡ, ಹೇಮರಾಜ್ ಅಣ್ಣೇಗೌಡ, ನಂಜೇಗೌಡ, ಶಿವೇಗೌಡ, ನೇತ್ರಾವತಿ, ವಲಯದ ಮೇಲ್ವಿಚಾರಕಿ ಜ್ಯೋತಿ, ಸೇವಾ ಪ್ರತಿನಿಧಿ ನಾಗರತ್ನ, ವಿ.ಎಲ್.ಇ. ಶ್ವೇತಾ ಹಾಗೂ ಗ್ರಾಮದ ಮುಖಂಡರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 7 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 9 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ