ಗೋಕರ್ಣ : ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಈ ಹಿನ್ನೆಲೆಯಲ್ಲಿ ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿ ಜಾರಿ ತರುವ ಪ್ರಯತ್ನ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರಲಾಗುವುದು. ಮದರಾಸಕ್ಕೆ ಸೇರುವವರ ಸಂಖ್ಯೆಯೂ ಕಡಿಮೆಯಾಗಿ ನಮ್ಮ ಸರ್ಕಾರಿ ಶಾಲೆಗೆ ಸೇರುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಶಿಕ್ಷಣದಲ್ಲಿ ನೈತಿಕ ಶಿಕ್ಷಣದ ಕೊರತೆ ಇದೆ. ಸಿಎಂ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ನೈತಿಕ ಶಿಕ್ಷಣದ ತರಗತಿಗಳನ್ನು ನಡೆಸುತ್ತೇವೆ. ನೈತಿಕ ಶಿಕ್ಷಣದಲ್ಲಿ ಏನೇನು ಇರಬೇಕು ಎಂದು ಶಿಕ್ಷಣ ತಜ್ಞರು ಸಲಹೆ ಪಡೆದು ಮಾಡುತ್ತೇವೆ ಎಂದರು.