ಮದುರೈನ ಕಲ್ಲುಪಟ್ಟಿ ಪಟಾಕಿ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಐವರು ದುರ್ಮರಣ!

ಮದುರೈ: ದೀಪಾವಳಿ ಹಬ್ಬಕ್ಕೆಂದು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದಾಗ ಮಧುರೈನ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, ಇತರ ಮೂವರಿಗೆ ಗಂಭೀರ ಗಾಯಗಳಾಗಿವೆ.

ಕಲ್ಲುಪಟ್ಟಿ ಪ್ರದೇಶದ ಪಟಾಕಿ ತಯಾರಿಕೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ದುರ್ಘಟನೆ ನಡೆದಿದೆ ಸ್ಥಳಕ್ಕೆ ಅಗ್ನಿಶಾಮಕ ವಾಹನಸಿಬ್ಬಂದ ಆಗಮಿಸಿ ಬೆಂಕಿಯನ್ನು ನಂದಿಸಿದರು.
ತೀವ್ರ ಗಾಯಗೊಂಡ ಮೂವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

READ ALSO