ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ ಮತ್ತು ವಿಕಾಸ ಜನ ಸೇವಾ ಟ್ರಸ್ಟ್(ರಿ.),ಆಶ್ರಮ ಮಡಿಕೇರಿ ಇವರ ಸಹಕಾರದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ29ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.ಜನ ಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೇ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ಕರೆ ತರುವ ಉದ್ದೇಶದಿಂದ ಫೆಬ್ರವರಿ 15 ರಂದು ಜಾಥಾವನ್ನು ನಡೆಸಲಾಯಿತು. ಕೊಡಗು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ತಿಮ್ಮಯ್ಯ ಎನ್. ಟಿ ಹಸಿರು ನಿಷಾನೆಯನ್ನು ಹಾರಿಸಿ ಜಾಥಾಕ್ಕೆ ಚಾಲನೆಯನ್ನು ನೀಡಿ ಗಾಲಿಕುರ್ಚಿ ರ‍್ಯಾಲಿಯನ್ನು ರಾಜ ಸೀಟ್ ನಿಂದ ಪ್ರಾರಂಭಿಸಿ ದೇವಯ್ಯ ಸರ್ಕಲ್ ಮುಖಾಂತರ ಜನರಲ್ ಕೆ ಎಸ್ ತಿಮ್ಮಯ್ಯ ವೃತ್ತದಿಂದ ಸಾಗಿ ಅಶ್ವಿನಿ ಆಸ್ಪತ್ರೆಯ ತನಕ ನಡೆಸಲಾಯಿತು. ಈ ಸಂದರ್ಭದಲ್ಲಿ ಒಟ್ಟು 12 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಮತ್ತು ಅರೈಕೆದಾರರು, ಅಶ್ವಿನಿ ಆಸ್ಪತ್ರೆ ಮ್ಯಾನೇಜರ್ ರವೀಂದ್ರ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಪ್ರೋಗ್ರಾಮ್ ಸ್ಪೆಷಲಿಸ್ಟ್ ಬೋರಯ್ಯ, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಎ. ಪಿ ವಿಶ್ವನಾಥ್ ಹಾಗೂ ಎಂ. ಬಿ ಶಿವರಾಮ್ , ಸೇವಾಧಾಮ ಸಂಸ್ಥಾಪಕರಾದ ಕೆ. ವಿನಾಯಕ ರಾವ್, ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ಸ್ವಯಂಸೇವಕರಾದ ಚಂದನ್ ಗುಡಿಗಾರ್, ಸೇವಾಭಾರತಿ ಸಿಬ್ಬಂದಿವರ್ಗದವರು, ಹಾಗೂ ವಿದ್ಯಾರ್ಥಿಗಳು ಸೇರಿದಂತೆ 100 ಮಂದಿ ಜಾಥದಲ್ಲಿ ಭಾಗವಹಿಸಿದ್ದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ