ಬೆಂಗಳೂರು: ಕೆಲವು ದಿನಗಳಿಂದ ಹವಾಮಾನ ವ್ಯತ್ಯಾಸದಿಂದ ಮತ್ತು ನಿರಂತರವಾಗಿ ಮಳೆಯಿಂದ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಕೆಲವು ಜನರಲ್ಲಿ ಕಣ್ಣಿನ (Conjunctivitis) ಸಮಸ್ಯೆ ಕಂಡುಬರುತ್ತಿರುವ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಈ ಕೆಳಕಂಡಂತೆ ಮಾಹಿತಿಯನ್ನು ತಿಳಿಸುವುದು ಹಾಗೂ ಸಂಬಂಧಪಟ್ಟ ವೈದ್ಯಾಧಿಕಾರಿಗಳು ಆಸ್ಪತ್ರೆಗಳಲ್ಲಿ ಬಂದ ಕಣ್ಣಿನ ಉರಿ ಊತದ ರೋಗಿಗಳಿಗೆ ವೈದ್ಯರು ನೋವು ನಿವಾರಕ ಮಾತ್ರೆ ಮತ್ತು ಕಣ್ಣಿನ ಡ್ರಾಪ್ಸ್ ಚಿಕಿತ್ಸೆ ನೀಡುವುದು. ಮೂಗಿನ ಮತ್ತು ಗಂಟಲಿನ ಸೊಂಕು ಇದ್ದಲ್ಲಿ ಅದಕ್ಕೆ ಬೇಕಾದ ಚಿಕಿತ್ಸೆ ನೀಡುವುದು. ಶಸ್ತ್ರ ಚಿಕಿತ್ಸೆ ಒಳಪಟ್ಟಿರುವ ರೋಗಿಗಳು ಮತ್ತು ಕಣ್ಣಿನ ಉರಿ ಊತ ಇರುವ ರೋಗಿಗಳಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವ ಬಗ್ಗೆ ಅಂಧತ್ವ ನಿಯಂತ್ರಣಾ ವಿಭಾಗದಿಂದ ಮಾರ್ಗಸೂಚಿ ಹೊರಡಿಸಲಾಗಿದೆ.
ಕಣ್ಣಿನ ಉರಿ ಊತ ಕಾಣಿಸುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ನೀಡಬೇಕಾದ ಮಾಹಿತಿ ಹಾಗೂ ರೋಗದ ಲಕ್ಷಣಗಳು:
• ಕಣ್ಣಿನ ಬಿಳಿ ಭಾಗವು ಕೆಂಪಾಗುತ್ತದೆ. ಕಣ್ಣುಗಳಲ್ಲಿ ಉರಿ ಮತ್ತು ನೋವು ಇರುತ್ತದೆ.