ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಕಾರು ಅಪಘಾತದಲ್ಲಿ ಮೃತ್ಯು

ಕಲಬುರ್ಗಿ: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ (MD) ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತವಾಗಿದೆ. ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಐವರು ಪೈಕಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 37 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ