ಮಹಾತ್ಮ ಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಸುನೀತಾ ಮಂಜುನಾಥ್ ಆಯ್ಕೆ

ಬೆಳ್ತಂಗಡಿ: ಮಹಾತ್ಮಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ಅಶ್ವತ್ಥನಗರ ನಿವಾಸಿ ಸುನೀತಾ ಮಂಜುನಾಥ್ ಆಯ್ಕೆಯಾಗಿದ್ದಾರೆ. ಇವರು 2020-21 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ವಿಶೇಷ-ಐ.ಇ.ಸಿ ಸಂಯೋಜಕರಾಗಿ ಯಶಸ್ವಿಯಾಗಿ ಕರ್ತವ್ಯನಿರ್ವಹಿಸಿದಕ್ಕಾಗಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಎ 09 ರಂದು ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಪ್ತಕಾರ್ಯದರ್ಶಿ ಮಂಜುನಾಥ್ ಅವರ ಪತ್ನಿಯಾಗಿರುವ ಸುನೀತಾ ಮಂಜುನಾಥ್ ಪ್ರಸ್ತುತ ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ನರೇಗಾ ಯೋಜನೆಯ ಮಾಹಿತಿ, ಶಿಕ್ಷಣ, ಸಂವಹನ ಸಂಯೋಜಕಿಯಾಗಿ ಕರ್ತವ್ಯ ನಿರ್ವಹಿಸುತಿದ್ದಾರೆ.

READ ALSO