ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದು ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಹಲವು ಲೋಪದೋಷಗಳನ್ನು ಗುರುತಿಸಿ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲೇ ಮಸೂದೆ ಮಂಡಿಸಿ ಚರ್ಚೆ ಮಾಡಿ ಕಳುಹಿಸಿ ಎಂದು ಸುಗ್ರೀವಾಜ್ಞೆ ತಿರಸ್ಕರಿಸಿದ್ದಾರೆ. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದ ಸರ್ಕಾರ ಈಗ ಸುಗ್ರೀವಾಜ್ಞೆ ಕರಡು ಬಿಲ್ ಪರಿಷ್ಕರಣೆ ಮಾಡಿ ಮಸೂದೆ ತರಬೇಕಿದೆ.

ಈ ಮೊದಲು ಕೆಲ ದೋಷಗಳನ್ನು ಸರಿಪಡಿಸುವಂತೆ ಸ್ಪಷ್ಟೀಕರಣಕ್ಕೆ ರಾಜ್ಯಪಾಲರು ಸರ್ಕಾರಕ್ಕೆ ಕಳುಹಿಸಿದರು. ಆದಾದ ಬಳಿಕ ಮತ್ತೆ ಸುಗ್ರೀವಾಜ್ಞೆ ಕಳುಹಿಸಿದ್ದ ಸರ್ಕಾರ. ಅಲ್ಲದೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಎಂ ಸಿಎಸ್ ರಾಜ್ಯಪಾಲರನ್ನ ಭೇಟಿ ಮಾಡಿ ವಿವರಣೆ ನೀಡಿದ್ದಾರೆ.

ಆದ್ರೆ ಆರ್‌ಬಿಐ ನಿಯಮಾವಳಿಗಳಿಗೆ ಅಡ್ಡಿ, ಸಾಲ ಕೊಟ್ಟವರ ರಕ್ಷಣೆ ಬಗ್ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು, ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

ಮಸೂದೆಯಲ್ಲಿ ಸಾಲ ಪಡೆದವರಿಗೆ ರಕ್ಷಣೆ ಇದೆ. ಆದ್ರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಇಲ್ಲ. ಅಲ್ಲದೇ ಆರ್‌ಬಿಐ ನಿಯಮಗಳು, ಪೊಲೀಸ್ ನಿಯಮಗಳಲ್ಲಿ ವ್ಯತಿರಿಕ್ತ ಪರಿಣಾಮಗಳಿವೆ. ಸಾಲಪಡೆದವರಿಗೆ ರಕ್ಷಣೆ ಇರುವಂತೆ, ಸಾಲ ಕೊಡುವವರಿಗೂ ರಕ್ಷಣೆ ಇರಬೇಕು ಎಂದು ರಾಜ್ಯಪಾಲರು ಸಲಹೆ ನೀಡಿದ್ದಾರೆ.

ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ ನೀವು ಐದು ಲಕ್ಷ ದಂಡ‌ ಹೇಗೆ ಒದಗಿಸುತ್ತೀರಾ? ಎಂದು ಪ್ರಶ್ನೆ ರಾಜ್ಯಪಾಲರು ಪ್ರಶ್ನೆ ಮಾಡಿದ್ದಾರೆ.

ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಿ. ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ. ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.

Spread the love
  • Related Posts

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    ಸಕಲೇಶಪುರ: ಬೆಂಗಳೂರು ಮಂಗಳೂರು ಸಂಪರ್ಕರಸ್ತೆಯ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ.…

    Spread the love

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    You Missed

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 36 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 170 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 82 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 281 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 192 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 114 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು