ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ಅಧ್ಯಕ್ಷರಾಗಿ ಸತ್ಯ ನಾಡೆಲ್ಲಾ ಆಯ್ಕೆ

ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರನ್ನು ಹೊಸ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಮೈಕ್ರೋಸಾಫ್ಟ್ ಕಾರ್ಪ್ ಜಾನ್ ಥಾಮ್ಸನ್ ಅವರ ಬದಲಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾಡೆಲ್ಲಾ ಅವರನ್ನು ನೂತನ ಅಧ್ಯಕ್ಷರಾಗಿ ನೇಮಿಸಲಾಗಿದೆ.

2014 ರಲ್ಲಿ ಸ್ಟೀವ್ ಬಾಲ್ಮರ್ ಅವರಿಂದ ಅಧಿಕಾರ ವಹಿಸಿಕೊಂಡ ನಾಡೆಲ್ಲಾ ಲಿಂಕ್ಡ್ ಇನ್, ನುವಾನ್ಸ್ ಕಮ್ಯುನಿಕೇಷನ್ಸ್ ಮತ್ತು ಜೆನಿಮ್ಯಾಕ್ಸ್ ನಂತಹ ಶತಕೋಟಿ ಡಾಲರ್ ಕಂಪನಿಗಳ ಸ್ವಾಧೀನ ಒಳಗೊಂಡಂತೆ ಮೈಕ್ರೋಸಾಫ್ಟ್ ವ್ಯವಹಾರ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

READ ALSO

2014 ರಲ್ಲಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರಿಂದ ಅಧಿಕಾರ ವಹಿಸಿಕೊಂಡಿದ್ದ ಥಾಮ್ಸನ್ ಈಗ ಪ್ರಮುಖ ಸ್ವತಂತ್ರ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕಂಪನಿ ತಿಳಿಸಿದೆ.