ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಬಸ್ ಗಳಿಗೆ ಚಾಲನೆ

ಮಂಗಳೂರು: ಮಂಗಳೂರಿನ ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ನವೆಂಬರ್ 01ರ ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್ ಗಳಿಗೆ ಸಂಸದರಾದ‌ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು.

READ ALSO

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ, ಉಮಾನಾಥ್ ಕೊಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಮೀನುಗಾರಿಕಾ‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ್, ಕೆ.ಎಸ್.ಆರ್.ಟಿ.ಸಿ ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಇತರೆ ಜನ‌ಪ್ರತಿನಿಧಿಗಳು, ಸಾರಿಗೆ‌ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.