ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ ಹೆಗ್ಗಡೆ ಸೇರಿದಂತೆ ಕರಾವಳಿಯ ಮೂವರಿಗೆ ಗೌರವ ಡಾಕ್ಟರೇಟ್

ಮಂಗಳೂರು: ಮಂಗಳೂರು ವಿಶ್ವ ವಿದ್ಯಾನಿಲಯದಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ ಹೆಗ್ಗಡೆ ಯವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಹಾಗೂ ಅವರ ಸಮಾಜಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ.

ಇನ್ನುಳಿದಂತೆ ಸಾಹಿತ್ಯ ಹಾಗೂ ಸಮಾಜಸೇವೆಗಾಗಿ ಹರಿಕೃಷ್ಣ ಪುನರೂರು ಹಾಗೂ ತುಳು ರಂಗಭೂಮಿ ಹಾಗೂ ಸಿನಿಮಾ ಕ್ಷೇತ್ರದಲ್ಲಿನ ಸಾಧನೆಗಾಗಿ ದೇವಿದಾಸ್ ಕಾಪಿಕ್ಕಾಡ್ ಅವರಿಗೂ ಗೌರವ ಡಾಕ್ಟರೇಟ್ ಗೌರವ ಲಭಿಸಿದೆ.

READ ALSO

ಮಂಗಳೂರು ವಿಶ್ವವಿದ್ಯಾನಿಲಯದ 40ನೇ ಘಟಿಕೋತ್ಸವ ಸಮಾರಂಭದಲ್ಲಿ ಮೂವರಿಗೆ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.