ಮಂಗಳೂರಿನಲ್ಲಿ ಆಗಸ್ಟ್ 5 ರಂದು 144 ಸೆಕ್ಷನ್ ಜಾರಿ, ನಿಷೇಧಾಜ್ಞೆ ಉಲ್ಲಂಘಿಸದಂತೆ ನಗರ ಪೊಲೀಸ್ ಕಮೀಷನರ್ ರಿಂದ ಖಡಕ್ ಆದೇಶ

ಮಂಗಳೂರು: ನಗರದಲ್ಲಿ ಆಗಸ್ಟ್ 5 ರಂದು ರಾಮ ಮಂದಿರದ ಭೂಮಿ ಪೂಜೆ ಹಿನ್ನಲೆಯಲ್ಲಿ 144 ಸೆಕ್ಷನ್ ಜಾರಿಯಾಗಲಿದೆ ಎಂದು ನಗರ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿ ಪೂಜೆ ನಡೆಯಲಿದ್ದು, ಭೂಮಿ ಪೂಜಾನಾ ದಿನದಂದು ಸಂಭ್ರಮಾಚರಣೆ ನಡೆಸಲು ಹಿಂದೂ ಸಂಘಟನೆಗಳು ತಯಾರಿನಡೆಸಿದ್ದರು ಅಲ್ಲದೆ ಅದೇ ದಿನದಂದು ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆಗೂ ಸಿದ್ಧತೆ ಬಗ್ಗೆ ಮಾಹಿತಿ ನಗರ ಪೋಲಿಸ್ ಇಲಾಖೆಗೆ ದೊರಕಿತ್ತು.

READ ALSO

ಈ ಹಿನ್ನಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ವಿಕಾಶ್ ಕುಮಾರ್ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಕಮೀಷನೇಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ನಗರದಾದ್ಯಂತ ನಿಷೇಧಾಜ್ಞೆ ನಡೆಯಲಿದ್ದು,ನಿಷೇಧಾಜ್ಞೆ ಉಲ್ಲಂಘಿಸದಂತೆ ಖಡಕ್ ಆದೇಶ ನೀಡಿದ್ದಾರೆ.